ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ಹಣ ಪೋಲು: ಆರ್‌.ಅಶೋಕ್‌

8 months ago

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ರಾಜ್ಯ ಸರ್ಕಾರ ಬೊಕ್ಕಸದ ಹಣವನ್ನು ಪೋಲು ಮಾಡುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್‌.ಅಶೋಕ್‌ ಆಪಾದಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿಕೆಯೊಂದನ್ನು ಪೋಸ್ಟ್ ಮಾಡಿರುವ ಅವರು, ಜಾತಿಗಣತಿ ಹೆಸರಿನಲ್ಲಿ ಹತ್ತು ವರ್ಷಗಳ ಹಿಂದೆಯೇ 150 ಕೋಟಿ ರೂಪಾಯಿ ಹಣವನ್ನು ಪೋಲು ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಅದಕ್ಕಿಂತಲೂ ಹೆಚ್ಚಿನ ಸಾರ್ವಜನಿಕ ಹಣವನ್ನು ಅಪವ್ಯಯ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಜಾತಿಗಣತಿ ನಡೆಸಲು ಎಷ್ಟು ಸಮಯ ಬೇಕು ಎನ್ನುವ ಬಗ್ಗೆ ಪೂರ್ವಯೋಜನೆ ಇಲ್ಲ? ಜಾತಿಗಣತಿಯಲ್ಲಿ ಯಾವ ಪ್ರಶ್ನೆ ಕೇಳಬೇಕು ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಜಾತಿಗಣತಿಗೆ ಶಿಕ್ಷಕರನ್ನು ನಿಯೋಜನೆ ಮಾಡಿದರೆ ಸರ್ಕಾರಿ ಶಾಲೆಗಳಲ್ಲಿ ಯಾರು? ಪಾಠ ಮಾಡುತ್ತಾರೆ ಎನ್ನುವ ಬಗ್ಗೆ ಯೋಚನೆ ಮಾಡಲಿಲ್ಲ ಎಂದು ಆರೋಪಿಸಿದ್ದಾರೆ.

ಯಾವುದೇ ಪೂರ್ವಸಿದ್ಧತೆ, ರೂಪುರೇಷೆ, ಗೊತ್ತು-ಗುರಿ ಇಲ್ಲದೆ, ಕೇವಲ ರಾಜಕೀಯ ತೆವಲಿಗೆ ಮಾಡುತ್ತಿರುವ ಈ ಜಾತಿಗಣತಿಯಿಂದ ಕನ್ನಡಿಗರಿಗೆ ನಯಾ ಪೈಸೆ ಉಪಯೋಗವಿಲ್ಲ. ಕಾಂಗ್ರೆಸ್‌‍ ಸರ್ಕಾರ, ಈಗ ಮತ್ತೊಮ್ಮೆ 650 ಕೋಟಿ ರೂಪಾಯಿ ಕನ್ನಡಿಗರ ತೆರಿಗೆ ಹಣವನ್ನು ಬೇಕಾಬಿಟ್ಟಿ ಪೋಲು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Reply