ವಿಜಯಪುರ: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಜಿಲ್ಲೆಯ ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಜಿಲ್ಲಾ ಪೊಲೀಸರು ಮಹಾರಾಷ್ಟ್ರ ಮೂಲದ ಒಬ್ಬ ಆರೋಪಿ ಜೊತೆ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಬಿಹಾರದ ಮೂವರನ್ನು ಬಂಧಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಪ್ರಕರಣದಲ್ಲಿ ದರೋಡೆಕೋರರು ಬಳಸಿದ್ದ ಒಂದು ಕಾರು ಒಂದು ಬೈಕ್ ಹಾಗೂ ಒಟ್ಟು 9.01 ಕೆಜಿ ಚಿನ್ನಾಭರಣ ಹಾಗೂ 86,31,220 ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಆರ್ೂ.ಹಿತೇಂದ್ರ ತಿಳಿಸಿದ್ದಾರೆ.
ಕಳೆದ ಸೆ.16ರಂದು ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದ್ದ ಎಸ್ಬಿಐ ಬ್ಯಾಂಕ್ ದರೋಡೆಗೆ ಬಂದೂಕು ಪೂರೈಸಿದ್ದ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಬಿಹಾರ ಮೂಲದ ರಾಕೇಶ್ ಕುಮಾರ್ ಸಹಾನಿ, ರಾಜಕುಮಾರ್ ಪಾಸ್ವಾನ ಹಾಗೂ ರಕ್ಷಕ್ ಕುಮಾರ್ ಮ್ಯಾತೋ ನನ್ನು ಬಂಧಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ನಡೆದಿದ್ದ ಎಸ್ಬಿಐ ಬ್ಯಾಂಕ್ ಕಳ್ಳತನ ಹಾಗೂ ದರೋಡೆ ಪ್ರಕರಣ ಭೇದಿಸುವಲ್ಲಿ ವಿಜಯಪುರ ಪೊಲೀಸರು ಮುನ್ನಡೆ ಸಾಧಿಸಿದ್ದಾರೆ. ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದ್ದ ಮನಗೂಳಿಯ ಕೆನರಾ ಬ್ಯಾಂಕ್ ಕಳ್ಳತನ ಹಾಗೂ ಚಡಚಣದ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾಗಶಃ ತನಿಖೆ ಮುಕ್ತಾಯವಾಗಿದ್ದು, ಇನ್ನುಳಿದ ತನಿಖೆ ಮುಂದುವರೆದಿದೆ. ಉತ್ತಮ ಕರ್ತವ್ಯ ನಿರ್ವಹಿಸಿ ಎರಡೂ ಪ್ರಕರಣಗಳನ್ನು ಭೇದಿಸಿದ ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ. ಬ್ಯಾಂಕ್ ಸಿಬ್ಬಂದಿ ಕೂಡ ಕಳ್ಳತನ ಮತ್ತು ದರೋಡೆಗಳು ನಡೆಯದಂತೆ ಮುಂಜಾಗ್ರತೆಯಾಗಿ ಆರ್ಬಿಐ ನಿಯಮಗಳನ್ನು ಪಾಲಿಸುವ ಅಗತ್ಯವಿದೆ ಎಂದರು.




