ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ, ಕಾಲೇಜು ದಾವಣಗೆರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪ್ರಸಕ್ತ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 15ರಂದು ನಗರದ ದೃಶ್ಯ ಕಲಾ ಮಹಾವಿದ್ಯಾಲಯ ಆಯೋಜಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ಹೇಳಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು 15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರು ಮಾತ್ರ ಭಾಗವಹಿಸಲು ಅವಕಾಶ ಇರುತ್ತದೆ. ದಾವಣಗೆರೆ ಜಿಲ್ಲೆಯ ಎಲ್ಲಾ ಯುವಕ, ಯುವತಿಯರು. ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಭಾಗವಹಿಸಬಹುದು.
ಅಕ್ಟೋಬರ್ 14 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ತಮ್ಮ ಆಧಾರ್ ಕಾರ್ಡ್ & ಜನನ ಪ್ರಮಾಣ ಪತ್ರದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಪಡೆದು ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳಬಹುದು ಅಥವಾ ಅ.15 ರಂದು ದೃಶ್ಯ ಕಲಾ ಮಹಾವಿದ್ಯಾಲಯ, ದಾವಣಗೆರೆ ಇಲ್ಲಿ ಬೆಳಿಗ್ಗೆ 9.00 ಗಂಟೆಯಿಂದ 10.30 ರ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಛೇರಿಗೆ ಸಂಪರ್ಕಿಸುವುದು. ದೂ.ಸಂ : 08192-237480 ಸಂಪರ್ಕಿಸಬಹುದು.




