ಬೆಂಗಳೂರು: ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ಧಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ ಎಂದಿದ್ದಾರೆ.
ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ ಎಸ್ ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ ಎಸ್ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಲ್ಲಿಸಿದ್ದೇನೆ ಎಂದಿದ್ದಾರೆ.





