ಮಧ್ಯಮ ಎಳೆ ಹತ್ತಿಗೆ ರೂ.7,710 ಮತ್ತು ಉದ್ದನೆಯ ಎಳೆ ಹತ್ತಿಗೆ ರೂ.8,110 ದರ ನಿಗದಿ; ಅ.31 ರೊಳಗೆ ರೈತರ ನೋಂದಣಿಗೆ ಅವಕಾಶ: ದಿವ್ಯ ಪ್ರಭು
ಧಾರವಾಡ: ರಾಜ್ಯದಲ್ಲಿ ಹತ್ತಿ ಪ್ರಮುಖ ಬೆಳೆಯಾಗಿದ್ದು, ಹತ್ತಿ ಕೃಷಿ ಉತ್ಪನ್ನಕ್ಕೆ ಪ್ರಸ್ತುತ ಮಾರುಕಟ್ಟೆ ದರ ಕಡಿಮೆಯಾಗಿರುವುದರಿಂದ ಕೇಂದ್ರ ಸರ್ಕಾರ 2025-26 ನೇ ಸಾಲಿಗೆ ಹತ್ತಿ ಕೃಷಿ ಉತ್ಪನ್ನಕ್ಕೆ ಬೆಂಬಲ ಬೆಲೆ ಯೋಜನೆಯಡಿ ಮಧ್ಯಮ ಎಳೆ ಹತ್ತಿಗೆ ರೂ.7,710 ಮತ್ತು ಉದ್ದನೆಯ ಎಳೆ ಹತ್ತಿಗೆ ರೂ.8,110 ದರವನ್ನು ಘೊಷಿಸಿದೆ. ರೈತರು ಇದರ ಪ್ರಯೋಜನ ಪಡೆಯಬೇಕೆಂದು ಜಿಲ್ಲಾ ಟಾಸ್ಕ್ ಪೋರ್ಸ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರ ಆರ್ಥಿಕ ಹಿತದೃಷ್ಟಿಯಿಂದ ಭಾರತೀಯ ಹತ್ತಿ ನಿಗಮದಿಂದ ಬೆಂಬಲ ಬೆಲೆ ಯೋಜನೆಯಡಿ ಸುಗಮವಾಗಿ ರೈತರ ನೋಂದಣಿಯನ್ನು ಡಿಜಿಟಲ್ ಮೂಲಕ ಕೈಗೊಳ್ಳುವ ಹಾಗೂ ನಿಗದಿತ ಸಮಯಕ್ಕೆ ಮಾರಾಟ ಮಾಡಿದ ಹತ್ತಿಯ ಪ್ರಮಾಣಕ್ಕನುಗುಣವಾಗಿ ಡಿ.ಬಿ.ಟಿ ಮೂಲಕ ರೈತರಿಗೆ ಹಣ ಪಾವತಿಯಾಗಲು ಅನುಕೂಲವಾಗುವಂತೆ, ಕಪಾಸ್ ಕಿಸಾನ್ ಎಂಬ ಮೊಬೈಲ್ ಆ್ಯಪ್ ಸಿದ್ದಪಡಿಸಲಾಗಿದೆ. ಈ ಮೊಬೈಲ್ ಆ್ಯಪ್ ಮೂಲಕ ರೈತರು ಅಕ್ಟೋಬರ್ 31, 2025 ವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಹತ್ತಿ ಬೆಳೆಯುವ ರೈತರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸುಗಮವಾಗಿ ಹತ್ತಿ ಮಾರಾಟ ಮಾಡಲು ಅನುಕೂಲವಾಗುವಂತೆ ರೈತರ ನೋಂದಣಿಗಾಗಿ ಇ-ಆಡಳಿತ ಇಲಾಖೆಯಿಂದ ಎಪಿಐ ಅನ್ನು ಈಗಾಗಲೇ ಭಾರತಿಯ ಹತ್ತಿ ನಿಗಮದೊಂದಿಗೆ ಜೋಡಣೆ ಮಾಡಲಾಗಿದೆ.
ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿ ನಿರ್ವಹಣೆಗಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯದರ್ಶಿ, ಸಿಸಿಐ ಅಧಿಕಾರಿಗಳು, ಕೃಷಿ ಇಲಾಖೆ ಹಾಗೂ ಇತರೆ ಸ್ಥಳಿಯ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಯಾವುದೇ ತಾಂತ್ರಿಕ ದೋಷ, ನ್ಯೂನತೆಗಳಿಗೆ ಆಸ್ಪದ ನೀಡದೇ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಯೋಜನೆಯ ಪ್ರಯೋಜನ ಪಡೆಯಲು ಈ ಮೂಲಕ ಕ್ರಮ ವಹಿಸಲಾಗಿದೆ.
ಕನಿಷ್ಠ ಬೆಂಬಲ ಬೆಲೆ (ಎಮ್ಎಸ್ಪಿ) ಯೋಜನೆ ಅಡಿಯಲ್ಲಿ ಈಗಾಗಲೇ ರೈತರ ಸ್ವಯಂ ನೋಂದಣಿಯನ್ನು ಸೆಪ್ಟೆಂಬರ್ 01 ರಿಂದ ಆರಂಭಿಸಿದ್ದು, ಅಕ್ಟೋಬರ್ 31, 2025 ರವರೆಗೆ ವಿಸ್ತರಿಸಲಾಗಿದೆ. ಭಾರತೀಯ ಹತ್ತಿ ನಿಗಮ (ಸಿಸಿಐ) ಇವರಿಗೆ ಹತ್ತಿ ಉತ್ಪನ್ನ ಮಾರಾಟ ಮಾಡಲು ಕಪಾಸ್ ಕಿಸಾನ್ ಎಂಬ ಮೊಬೈಲ್ ಆ್ಯಪ್ ಮೂಲಕ ರೈತರು ಸ್ವಯಂ ನೋಂದಾಯಿಸಿಕೊಳ್ಳಬೇಕು.




