ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆಗಳನ್ನು ನವೆಂಬರ್ 08ರಂದು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದೆ.
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್ 08ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಕಾರ್ಮಿಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸ್ಪರ್ಧೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರದ ಖಾಯಂ ನೌಕರರು ಸಂಘವು ನೀಡಿರುವ https://forms.gle/8pR3m5nXowwQzccs9 ಆನ್ಲೈರನ್ ಲಿಂಕ್ನುಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಸ್ಪರ್ಧೆಗಳಲ್ಲಿ ವಿಜೇತ ತಂಡಗಳಿಗೆ ಪ್ರಥಮ ಬಹುಮಾನ ರೂ.1,00,000-00, ದ್ವಿತೀಯ ಬಹುಮಾನ ರೂ.75,000-00, ತೃತೀಯ ಬಹುಮಾನ ರೂ.50,000-00 ಹಾಗೂ ಸಮಾಧಾನಕರ ಬಹುಮಾನ ರೂ.20,000-00 ನಗದು ಬಹುಮಾನ ನೀಡಲಾಗುತ್ತದೆ.




