ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಭರ್ತಿಯಾಗದೆ ಉಳಿದಿರುವ 28 ಸೀಟುಗಳಿಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಲ್ಲಿ ನೋಂದಾಯಸಿದ ಹಾಗೂ ಸಿ.ಇ.ಟಿ ನೋಂದಣಿ ಸಂಖ್ಯೆ ಹೊಂದಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಮೆರಿಟ್ ಆಧಾರದ ಮೇಲೆ ನಿಯಮಾನುಸಾರ ಸೀಟು ಹಂಚಿಕೆ ಮಾಡಲಾಗುವುದು. ದಾಖಲಾತಿ ಪಡೆಯಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 29 ಸಂಜೆ 5 ಗಂಟೆಯ ಒಳಗಾಗಿ, ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಹೊಸ ತಾಯಿ ಮಕ್ಕಳ ಆಸ್ಪತ್ರೆ 3 ಮಹಡಿಯಲ್ಲಿರುವ ಬಿ.ಎಸ್ಸಿ. ನರ್ಸಿಂಗ್ ಕಾಲೇಜಿಗೆ ಅರ್ಜಿ ಸಲ್ಲಿಸಬೇಕು.
ಅಕ್ಟೋಬರ್ 30 ರಂದು ಕೌನ್ಸಿಲಿಂಗ್ ನಡೆಸಿ ಮಧ್ಯಾಹ್ನ 1 ಗಂಟೆಯ ನಂತರ ಸೀಟು ಹಂಚಿಕೆ ಮಾಡಲಾಗುವುದು. ಅಭ್ಯರ್ಥಿಗಳು ಸಂಜೆ 5 ಗಂಟೆಯ ಒಳಗಾಗಿ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು.



