ಬಳ್ಳಾರಿ: ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಮೇದಾ, ಮೇದಾರಿ, ಗೌರಿಗ, ಬುರುಡ, ಮೇದಾರ ಬುಡಕಟ್ಟು ಸಮುದಾಯದ ಬಗ್ಗೆ ಮಾಹಿತಿ ಹೊಂದಿರುವ ಹಾಗೂ ಸೇವೆ ಮಾಡುವ ಮನೋಭಾವ ಹೊಂದಿರುವ 05 ನಾಮ ನಿರ್ದೇಶಿತ ಸದಸ್ಯತ್ವಕ್ಕೆ ಆಸಕ್ತ ಸಮುದಾಯದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಈ ಸಮಿತಿಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗುತ್ತದೆ. ಆಸಕ್ತರು ನಿಗದಿತ ನಮೂನೆಯ ಅರ್ಜಿ ಭರ್ತಿ ಮಾಡಿ ನವೆಂಬರ್ 04 ರೊಳಗೆ ನಗರದ ನಲ್ಲಚೆರವು ಪ್ರದೇಶದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-242453 ಗೆ ಸಂಪರ್ಕಿಸಬಹುದು.




