ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಗ್ರೇಟರ್ ಮೈಸೂರು ಕುರಿತ ಪ್ರಥಮ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಕೆಲವು ಮಹತ್ವದ ಸೂಚನೆಗಳನ್ನು ನೀಡಿದರು.
ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್‌ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದರು.
ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಈಗಿನ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸದೆ, ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕಿದೆ ಎಂದರು.
ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಮಾಡುವ ಬಗ್ಗೆ ಯೋಜನೆ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದರು.
ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಬಡಾವಣೆಗಳ ನಿರ್ಮಾಣ ಆಗುವಾಗ ಚರಂಡಿ, ರಸ್ಯೆಗಳು, ಒಳಚರಂಡಿ, ನೀರು, ವಿದ್ಯುತ್ ಸಂಪರ್ಕದ ಜೊತೆಗೆ ಪಾರ್ಕ್ ಗಳು ಕೂಡ ವ್ಯವಸ್ಥಿತವಾಗಿರಬೇಕು ಎಂದರು.
ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ ಯೋಜನೆ ಸಿದ್ಧ ಮಾಡಬೇಕು. ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಬೇಕು ಎಂದರು.
ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾ ಬದ್ಧವಾಗಿರಬೇಕು.
ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಒಂದು ಸಮಗ್ರವಾದ ಪ್ರಗತಿ ಯೋಜನೆ ಸಿದ್ಧಪಡಿಸಬೇಕಿದೆ ಎಂದು ಸೂಚಿಸಿದರು.




