ದೇಶದ ಬೆನ್ನೆಲುಬು ರೈತ, ‘ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ’ ಎಂಬ ಇತಿಹಾಸ ಮರುಕಳಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ನಡೆದ ಕಬ್ಬು ಬೆಳೆಗಾರ ರೈತರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3300 ರೂ ದರ ನಿಗದಿ ಪಡಿಸಿ ನಿರ್ಧಾರ ಕೈಗೊಂಡಿದೆ. ಹೋರಾಟ ನಿರತ ರೈತ ಬಂಧುಗಳು ನಿರ್ಧಾರವನ್ನು ಸ್ವಾಗತಿಸಿ ಮುಷ್ಕರವನ್ನು ಕೈ ಬಿಟ್ಟಿರುವುದು ಸಮಂಜಸವಾಗಿದೆ.
ಈ ಹೋರಾಟದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ, ರೈತನಾಯಕ ಮಾನ್ಯ BS Yediyurappa ಅವರ ಪುತ್ರನಾಗಿ ಭಾಗವಹಿಸಿ ರೈತ ಹೋರಾಟಕ್ಕೆ ದನಿಗೂಡಿಸಿದ ಸಂದರ್ಭ ನನ್ನಲ್ಲಿ ಸಾರ್ಥಕಭಾವ ಮೂಡಿಸಿದೆ.
ರಾಜ್ಯದಲ್ಲಿ ರೈತರ ಹಿತಕ್ಕಾಗಿ ನಮ್ಮ ಸ್ಪಂದನೆ ಸದಾ ಮುಂದುವರೆಯಲಿದೆ. ರೈತರು ಹೋರಾಟಕ್ಕಿಳಿಯುವ ಸಂದರ್ಭ ಸೃಷ್ಟಿಸದೇ ರೈತರ ಬೇಡಿಕೆಗಳನ್ನು ಕಾಲಕಾಲಕ್ಕೆ ಈಡೇರಿಸುವುದು ಅಧಿಕಾರದಲ್ಲಿರುವ ಸರ್ಕಾರಗಳ ಕರ್ತವ್ಯ. Indian National Congress – Karnataka ಸರ್ಕಾರ ಈ ನಿಟ್ಟಿನಲ್ಲಿ ಈವರೆವಿಗೂ ಅನುಸರಿಸಿದ ಉಪೇಕ್ಷೆ ಧೋರಣೆಗಳನ್ನು ಮುಂದಾದರೂ ನಿಲ್ಲಿಸಲಿ.
ಮೇಲಿಂದ ಮೇಲೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ವರದಿಯಾಗುತ್ತಿವೆ, ರೈತರ ಸೂಕ್ಷ್ಮ ಭಾವನೆಗಳಿಗೆ ಸ್ಪಂದಿಸಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ರೈತರ ನಿವೇದನೆಗಳಿಗೆ ಸ್ಪಂದಿಸುವ ‘ವಿಶೇಷ ರೈತ ನೆರವು ಘಟಕ’ವನ್ನು ಸ್ಥಾಪಿಸಲಿ ಎಂದು ಒತ್ತಾಯಿಸುವೆ.
ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್ ಸೇರಿದಂತೆ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಹೋರಾಟ ನಡೆಸಿದ ರೈತರೆಲ್ಲರನ್ನೂ ಅಭಿನಂದಿಸುವೆ. ರೈತರ ಪರಿಶ್ರಮದ ಬೆವರಿಗೆ ಸಾರ್ಥಕ ಪತಿಫಲ ನಿರಂತರವಾಗಿ ಲಭಿಸುವಂತಾಗಲಿ ಎಂದು ಹಾರೈಸುವೆ.
– ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ




