ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ವಿಲಾಸಿ ಜೀವನದ ವಿಡಿಯೋ ವೈರಲ್ ಆಗಿದ್ದ ಸಂಬಂಧ ಗ್ಯಾಂಗ್ನ್ನು ಪತ್ತೆ ಹಚ್ಚಿರುವ ನಗರ ಪೊಲೀಸರು ನಾಲ್ವರು ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕೈದಿಗಳಾದ ಕಾರ್ತಿಕ್ ಅಲಿಯಾಸ್ ಚಿಟ್ಟೆ, ಧನಂಜಯ್, ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಹಾಗೂ ಚರಣ್ ರಾವ್ ಎಂದು ಗುರುತಿಸಲಾಗಿದ್ದು, ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈಯಲ್ಲಿ ಮದ್ಯದ ಬಾಟಲ್ ಹಿಡಿದು ಕಂಟಪೂರ್ತಿ ಕುಡಿದು, ಕುಣಿದು ಕುಪ್ಪಳಿಸಿದ್ದ ವಿಡಿಯೋ ವೈರಲ್ ಆಗಿತ್ತು. ಎಫ್ಐಆರ್ ದಾಖಲಾಗುತ್ತಿದ್ದಂತೆ ಖೈದಿಗಳ ಎಣ್ಣೆ ಪಾರ್ಟಿಯ ಬಾಟಲ್, ಗ್ಲಾಸ್ಗಳನ್ನ ಪರಪ್ಪನ ಅಗ್ರಹಾರ ಪೊಲೀಸರು ಎಫ್ಎಸ್ಎಲ್ಗೆ ಕಳಿಸಿದ್ದಾರೆ. ತನಿಖೆ ಮೂಲಕ ಮದ್ಯವನ್ನು ಹೊರಗಡೆಯಿಂದ ತರಿಸಲಾಗಿತ್ತಾ? ಅಥವಾ ಒಳಗಡೆ ಕೆಮಿಕಲ್ ಬಳಸಿ ತಯಾರಿಸಲಾಗಿತ್ತಾ? ಎನ್ನುವುದನ್ನು ಪತ್ತೆ ಹಚ್ಚಲಿದ್ದಾರೆ.
ಜೈಲಿನ ಬ್ಯಾರಕ್ ನಂ.8ರಲ್ಲಿ ರೂಮ್ ನಂಬರ್ 7ರಲ್ಲಿ ನಿಷೇಧಿತ ವಸ್ತುಗಳನ್ನ ಇಟ್ಟುಕೊಂಡು ಡ್ಯಾನ್ಸ್ ಮಾಡಿದ್ದಾರೆ. ಮೊಬೈಲ್ ಎಲ್ಲಿಂದ ಬಂತು? ವಿಡಿಯೋ ಚಿತ್ರೀಕರಿಸಿದವರು ಯಾರು? ವಿಡಿಯೋ ವೈರಲ್ ಹೇಗೆ ಆಯ್ತು? ಎಂಬ ಸಂಗತಿಗಳನ್ನು ಪತ್ತೆ ಹಚ್ಚಲು ನಾಲ್ವರು ಬಂಧಿತ ವಿಚಾರಣಾ ಖೈದಿಗಳನ್ನು ತನಿಖೆಗೆ ಒಳಪಡಿಸಿದ್ದಾರೆ.



