ಬೆಂಗಳೂರು: ನವೆಂಬರ್ 15 ರಂದು ಸಂಜೆ 3 ಗಂಟೆಗೆ ಜಿಬಿಎ ಕೇಂದ್ರ ಕಛೇರಿ ಅವರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ನೌಕರರ ಕನ್ನಡ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಲಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಮಧ್ಯಾಹ್ನ 3ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, 5:30ಕ್ಕೆ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ/ಸಾಧಕಿಯರಿಗೆ ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರದಾನ ಹಾಗೂ ಪಾಲಿಕೆಗಳ ಅಧಿಕಾರಿ ಮತ್ತು ನೌಕರರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕರು ಪಾಲ್ಗೊಳ್ಳಬೇಕು ಎಂದು ಜಿಬಿಎ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಮನವಿ ಮಾಡಿದ್ದಾರೆ.




