ವನ್ಯಜೀವಿ ಲೋಕದ ಇತಿಹಾಸದಲ್ಲಿ ಮರೆಯಲಾಗದ ದುರ್ಘಟನೆ

5 months ago

28 ಕೃಷ್ಣಮೃಗಗಳ ದುರ್ಮರಣ: ವನ್ಯಜೀವಿ ಲೋಕದ ಇತಿಹಾಸದಲ್ಲಿ ಮರೆಯಲಾಗದ ದುರ್ಘಟನೆ

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಬೆಳಗಾವಿ ಜಿಲ್ಲೆಯ  ಭೂತರಾಮನಹಟ್ಟಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಸಾವನ್ನಪ್ಪಿದ್ದು ವನ್ಯಜೀವಿ ಲೋಕದ ಇತಿಹಾಸದಲ್ಲಿ ಇದೊಂದು ಮರೆಯಲಾಗದ ದುರ್ಘಟನೆಯಾಗಿದೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಮಾಲತೇಶ್ ಅರಸ್ ಹರ್ತಿಕೋಟೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಗಳ ಸಾವು ಇನ್ನೂ ಮಾಸುವ ಮುನ್ನವೇ ಕೃಷ್ಣಮೃಗಗಳ  ಸಾವು ವನ್ಯಜೀವಿ ಲೋಕದ ಇತಿಹಾಸದಲ್ಲಿ ಇದೊಂದು ಮರೆಯಲಾಗದ ದುರ್ಘಟನೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಕೂಡಲೇ ಸಮಗ್ರ ತನಿಖೆಗೆ ಆದೇಶಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದಿದ್ದಾರೆ.

ಪ್ರಾಥಮಿಕ ವರದಿಯ ಪ್ರಕಾರ ಕೃಷ್ಣಮೃಗಗಳು  ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.   ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೇರೆ ಕಾರಣ ಇದೆಯೋ ಎಂದು ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಒಟ್ಟು 38 ಕೃಷ್ಣಮೃಗಗಳು ಇದ್ದವು. ಅದರಲ್ಲಿ ಈಗ 10 ಕೃಷ್ಣಮೃಗಗಳು ಮಾತ್ರ ಉಳಿದಿವೆ. ಆರೋಗ್ಯ ಅಧಿಕಾರಿಗಳು ಇನ್ನುಳಿದ ಪ್ರಾಣಿಗಳ ಆರೋಗ್ಯ ತಪಾಸಣೆಯಲ್ಲಿ ನಿರತರಾಗಲಿ ಎಂದು  ಮನವಿ ಮಾಡಿದ್ದಾರೆ.

Leave a Reply