ಪ್ರಭಾ ಮಲ್ಲಿಕಾರ್ಜುನ್ ಅವರಿಂದ ಚಾಲನೆ
ದಾವಣಗೆರೆ: ಕೆಎಸ್ಆರ್ಟಿಸಿ ದಾವಣಗೆರೆ ಬಸ್ ನಿಲ್ದಾಣದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಫ್ಲೈಬಸ್ (ವೋಲ್ವೋ) ಸೇವೆಯ ನೂತನ ಮಾರ್ಗಕ್ಕೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದಾವಣಗೆರೆ ಕೆಎಸ್ಆರ್ಟಿಸಿಯಿಂದ ಬಸ್ ನಿಲ್ದಾಣದಲ್ಲಿ ನೂತನ ವೋಲ್ವೊ ಬಸ್ಗೆ ಚಾಲನೆ ನೀಡಿದರು. ದಾವಣಗೆರೆ ಯಿಂದ ಬೆಳಗ್ಗೆ 10 ಗಂಟೆಗೆ ಹೊರಡುವ ಈ ಬಸ್ ಚಿತ್ರದುರ್ಗ, ತುಮಕೂರು, ದಾಬಸ್ಪೇೆಟೆ ಮಾರ್ಗವಾಗಿ ಮಧ್ಯಾಹ್ನ 1 ಗಂಟೆಗೆ ಹಾಗೂ ಸಂಜೆ 5 ಗಂಟೆಗೆ ಹೊರಟು ರಾತ್ರಿ 10 ಗಂಟೆಗೆ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ಹಾಗೆಯೇ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 12.45ಕ್ಕೆ ಹೊರಟು ಅದೇ ಮಾರ್ಗವಾಗಿ ಮುಂಜಾನೆ 5.45ಕ್ಕೆ ಹಾಗೂ ಬೆಳಗ್ಗೆ 10 ಗಂಟೆಗೆ ಹೊರಡುವ ಬಸ್ ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಬಸ್ ನಿಲ್ದಾಣ ಸೇರಲಿರುವ ಬಸ್ ಇದೇ ಮಾರ್ಗವಾಗಿ ಪ್ರತಿನಿತ್ಯ ಸಂಚರಿಸಲಿದೆ ಎಂದರು.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತುಮಕೂರು ಬಸ್ ನಿಲ್ದಾಣಕ್ಕೆ ರೂ.400, ಚಿತ್ರದುರ್ಗಕ್ಕೆ ರೂ. 980 ಹಾಗೂ ದಾವಣಗೆರೆಗೆ 1250 ರೂ ದರ ನಿಗಧಿಪಡಿಸಲಾಗಿದೆ. ಅದಷ್ಟೇ ಅಲ್ಲದೇ ಪ್ರಯಾಣಿಕರ ಅನುಕೂಲಕ್ಕಾಗಿ ಚಿತ್ರದುರ್ಗ ಬೈಪಾಸ್ ಮತ್ತು ತುಮಕೂರು ಬೈಪಾಸ್ ಸೇರಿ ಎರಡು ಮಾರ್ಗದ ಮಧ್ಯೆ ಪಿಕಪ್ ಮತ್ತು ಡ್ರಾಪ್ ಪಾಯಿಂಟ್ ಸಹ ನೀಡಲಾಗಿದೆ. ಪ್ರಯಾಣಿಕರು ಕೆಎಸ್ಆಪರ್ಟಿ ಸಿ ಬಸ್ ಸೇವೆ ಪಡೆಯುವಂತೆ ಕೋರಿದರು.
ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಸಿ ಡಿಸಿ ಶಿವಕುಮಾರಯ್ಯ, ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್ ಹಾಗೂ ಇನ್ನಿತರರು ಹಾಜರಿದ್ದರು.




