ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ದಯಾನಂದ್ ಅವರ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ.
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
ಈ ಹಿಂದೆ ಮೂರು ಬಾರಿ ನಕಲಿ ಅಕೌಂಟ್ ತೆಗೆದಿರುವ ಬಗ್ಗೆ ದಯಾನಂದ್ ಸೈಬರ್ ಪೊಲೀಸರ ಗಮನಕ್ಕೆ ತಂದಿದ್ದರು. ಆದರೂ ಸೈಬರ್ ಖದೀಮರು ಮುಂದುವರೆದು ಸೂಟ್ ಹಾಕಿರುವ ಹಾಗೂ ಮಕ್ಕಳ ಜೊತೆ ಇರುವ ಪೋಟೋ ಬಳಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಕಾರಾಗೃಹ ಎಡಿಜಿಪಿಯಾಗಿ ದಯಾನಂದ್ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಜೈಲಿನ ಒಳಗಡೆ ಇರುವ ವಿಡಿಯೋ ವೈರಲ್ ಆಗಿತ್ತು. ದಯಾನಂದ್ ಅವರಿಗೆ ಕೆಟ್ಟ ಹೆಸರು ತರಲು ವಿಡಿಯೋ ವೈರಲ್ ಮಾಡಲಾಗುತ್ತಿದೆ ಎಂಬ ಮಾತು ಕೇಳಿ ಬಂದಿತ್ತು. ಈಗ ನಕಲಿ ಎಫ್ಬಿ ಖಾತೆ ತೆರೆದು ಹಲವು ಮಂದಿಗೆ ಸ್ನೇಹಿತರಿಗೆ ರಿಕ್ವೆಸ್ಟ್ ಕಳಿಸಿದ ಬಗ್ಗೆ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.



