ಬೆಂಗಳೂರು: ಮಂತ್ರಿಮಂಡಲ ವಿಸ್ತರಣೆ ಅಧಿಕಾರ ಹಂಚಿಕೆ ಸೇರಿದಂತೆ ಹಲವಾರು ವಿಚಾರಗಳು ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಪ್ರಮಾಣದ ಚರ್ಚೆಗೆ ಗ್ರಾಸವಾಗಿರುವ ಬೆನ್ನೆಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಗತ್ತಿನಲ್ಲಿ ಎರಡು ಬಗೆಯ ಜನರು ಇರುತ್ತಾರೆ. ಒಬ್ಬರು ಬರೀ ಕೆಲಸ ಮಾಡುತ್ತಾರೆ. ಮತ್ತೊಬ್ಬರು ಅದರ ಲಾಭ ಪಡೆಯುತ್ತಾರೆ. ದಿವಂಗತ ಇಂದಿರಾ ಗಾಂಧಿ ಅವರು ಕೂಡ ಇದನ್ನು ಹೇಳಿದ್ದರು. ನೀವು ಕೆಲಸ ಮಾಡುವವರ ಗುಂಪಿಗೆ ಸೇರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕೆಲವರಿಗೆ ಅಧಿಕಾರ ಮಾತ್ರ ಬೇಕು. ಅವರು ಅಧಿಕಾರ ಪಡೆಯುತ್ತಾರೆ. ಮತ್ತೆ ಕೆಲವರು ಕೆಲಸ ಮಾಡುತ್ತಿರುತ್ತಾರೆ. ನಾವು ಆ ಕೆಲಸ ಮಾಡುವವರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು ಎಂದರು.
ಮತ್ತೊಬ್ಬರ ಶ್ರಮದಿಂದ ಅಧಿಕಾರ ಅನುಭವಿಸುವ ಕೆಲವರು ಪಕ್ಷದ ಕಚೇರಿಯನ್ನೇ ಮರೆತುಬಿಟ್ಟಿದ್ದಾರೆ. ಪಕ್ಷದ ಕಚೇರಿ ಎಂದರೆ ದೇವಸ್ಥಾನ. ಇದನ್ನೇ ಮರೆತು ಬಿಟ್ಟರೆ ಹೇಗೆ ಎಂದು ಪ್ರಶ್ನಿಸಿದರು.
ಗಾಂಧಿ ಶತಮಾನೋತ್ಸವ ಹಿನ್ನೆಲೆಯಲ್ಲಿ ನೂರು ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಈ ಕಾರ್ಯದಲ್ಲಿ ಎಲ್ಲಾ ಕಾರ್ಯಕರ್ತರು ತೊಡಗಿಕೊಳ್ಳಬೇಕು. ಯಾರು ಇದಕ್ಕೆ ಆಸಕ್ತಿ ವಹಿಸುವುದಿಲ್ಲವೋ ಅವರ ಹೆಸರುಗಳನ್ನು ಹೈಕಮಾಂಡ್ ಗೆ ನೀಡುತ್ತೇನೆ. ಎಲ್ಲದಕ್ಕೂ ಉತ್ತರ ನೀಡಲು ಹೋಗುವುದಿಲ್ಲ. ದೆಹಲಿಯ ನಾಯಕರು ಇದಕ್ಕೆ ಉತ್ತರ ಕೊಡುತ್ತಾರೆ ಎಂದರು.
ನಾವು ಯಾವುದೇ ಹುದ್ದೆಯಲ್ಲಿ ಇದ್ದರೂ ಕೂಡ ನಮ್ಮ ಸಾಕ್ಷಿಗುಡ್ಡೆ ಅಲ್ಲಿ ಇರಬೇಕು. ಹಾಗಾಗಿ ನಾನು ಪಕ್ಷದ ಅಧ್ಯಕ್ಷನಾಗಿ ನೂರು ಕಚೇರಿಗಳನ್ನು ನಿರ್ಮಿಸಿಕೊಟ್ಟು ಹೋಗುತ್ತೇನೆ. ಅಂತಹ ಸಾಧನೆಗಳನ್ನು ನೀವು ಎಲ್ಲರೂ ಮಾಡಬೇಕು ಎಂದು ಕರೆ ನೀಡಿದರು.
ನಾನು ಪಕ್ಷದ ಅಧ್ಯಕ್ಷನಾಗಿ ಶಾಶ್ವತವಾಗಿ ಇಲ್ಲಿರಲು ಬಂದಿಲ್ಲ. ಉಪಮುಖ್ಯಮಂತ್ರಿಯಾಗಿ ಕೂಡಲೇ ಈ ಸ್ಥಾನವನ್ನು ಬಿಟ್ಟುಕೊಡಲು ನಿರ್ಧರಿಸಿದೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನಾವು ಹೇಳುವವರಿಗೆ ಈ ಹುದ್ದೆಯಲ್ಲಿ ಮುಂದುವರೆಯಿರಿ ಎಂದು ತಿಳಿಸಿದ್ದಾರೆ. ಹಾಗಾಗಿ ಈ ಹುದ್ದೆ ನಿಭಾಯಿಸುತ್ತೇನೆ ಎಂದರು.
ನಾನು ಅಧಿಕಾರದಲ್ಲಿ ಇರುತ್ತೇನೋ ಇಲ್ಲವೋ ಎನ್ನುವುದು ಮುಖ್ಯವಾದ ವಿಷಯವಲ್ಲ. ಆದರೆ ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಸಭೆ ಮುಗಿಸಿ ಅವರು ಹೊರ ಬರುತ್ತಿದ್ದಂತೆ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂಬ ಘೋಷಣೆಯನ್ನು ಮೊಳಗಿಸಿದರು. ಇದಕ್ಕೂ ಮುನ್ನ ಡಿ ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಜೊತೆ ಒಂದೇ ಕಾರಿನಲ್ಲಿ ಬಂದರು. ಆಗಲು ಕೂಡ ಕೆಲವು ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಎಂಬ ಘೋಷಣೆಯನ್ನು ಕೂಗಿದರು.



