ಬೆಂಗಳೂರು: ಸರ್ಕಾರಕ್ಕೆ ಎರಡೂವರೆ ವರ್ಷಗಳ ಅಧಿಕಾರ ಪೂರ್ಣಗೊಂಡಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪುವುದಿಲ್ಲ ಎಂಬ ವಿಶ್ವಾಸ ನಮಗಿದೆ. ಕೊಟ್ಟ ಮಾತಿನಂತೆ ಅವರು ನಡೆದುಕೊಂಡರೆ ನಾಯಕರಾಗುತ್ತಾರೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಾವು ನೀಡಿದ ಭರವಸೆಗೆ ಗ್ಯಾರಂಟಿ ಆಗಿರುತ್ತಾರೆ ಈ ವಿಶ್ವಾಸ ನಮಗಿದೆ ಇದಲ್ಲದೆ,ನನ್ನಣ್ಣ ಡಿಕೆ ಶಿವಕುಮಾರ್ ಅವರಿಗೆ ಅದೃಷ್ಟ ಇದ್ದರೆ ಸಿಎಂ ಆಗುತ್ತಾರೆ.ಎಲ್ಲದಕ್ಕೂ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಉತ್ತರ ನೀಡುತ್ತದೆ ಎಂದರು.
ಸರ್ಕಾರ ರಚನೆ ಸಂದರ್ಭದಲ್ಲಿ ಹೈಕಮಾಂಡ್ ಮಟ್ಟದಲ್ಲಿ ನಡೆದ ಎಲ್ಲ ಮಾತಿಗೂ ನಾನು ಸಾಕ್ಷಿಯಾಗಿದ್ದೇನೆ. ಅದರ ಆಧಾರದಲ್ಲಿ ಹೈಕಮಾಂಡ್ ತೀರ್ಮಾನಿಸಲಿದೆ. ಸಿಎಂ ಹಾಗೂ ಡಿಸಿಎಂ ಅಷ್ಟೇ ಅಲ್ಲ ಸಾಮಾನ್ಯ ಕಾರ್ಯಕರ್ತನ ವಿಚಾರದಲ್ಲೂ ಸೂಕ್ತ ಚೀರ್ಮಾನ ಕೈಗೊಳ್ಳಲಿದೆ ಎಂದರು.
ಎಲ್ಲರಿಗೂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂಬ ಆಸೆ ಇದೆ, ಅವರಅಭಿಮಾನಿಗಳು ಪೂಜೆ ಹರಕೆ ಎಲ್ಲಾ ಮಾಡುತ್ತಿದ್ದಾರೆ. ಇದರ ಹೊರತಾಗಿ ಡಿಕೆ ಶಿವಕುಮಾರ್ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವವರು. ಪಕ್ಷ ಏನು ಆದೇಶ ಕೊಡುತ್ತದೆಯೋ ಅದರ ಪ್ರಕಾರ ನಡೆಯುತ್ತಾರೆ ಎಂದರು.



