ಬೆಂಗಳೂರು: ಚಿನ್ನಾಭರಣಗಳ ತಯಾರಕನ ಕಾರು ಅಡ್ಡಗಟ್ಟಿ ಕೆಜಿಗಟ್ಟಲೇ ಚಿನ್ನ ದರೋಡೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಸಮೀಪ ನಡೆದಿದೆ.ಕೇರಳದ ಕ್ಯಾಲಿಕಟ್ ನಿವಾಸಿ ಆಭರಣ ತಯಾರಕ ವಿನು(49) ಎರಡು ದಿನಗಳ ಬಳಿಕ ಗುಂಡ್ಲುಪೇಟೆ ಠಾಣೆಗೆ ಬಂದು ದೂರು ನೀಡಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮಂಡ್ಯದ ರಾಜೇಶ್ ಜ್ಯುವೆಲರ್ಸ್ ಎಂಬುವರಿಂದ ಆಭರಣ ತಯಾರಿಕೆಗಾಗಿ 800 ಗ್ರಾಂ 24 ಕ್ಯಾರೆಟ್ ಚಿನ್ನದ ಗಟ್ಟಿ ಹಾಗೂ 518 ಗ್ರಾಂ 22 ಕ್ಯಾರೆಟ್ ಚಿನ್ನವನ್ನು ಬಂಡೀಪುರದ ಮೂಲೆಹೊಳೆ ಮೂಲಕ ತರುತ್ತಿದ್ದಾಗ ಎರಡು ಇನ್ನೋವಾ ಹಾಗೂ ಒಂದು ಇಟಿಯೋಸ್ ವಾಹನದಲ್ಲಿ ಬಂದ ದರೋಡೆಕೋರರು ಮೊಬೈಲ್ ನೆಟ್ವರ್ಕ್ ಸಿಗದ ಸ್ಥಳದಲ್ಲಿ ಅಡ್ಡಗಟ್ಟಿ ಕಾರು ಸಮೇತ ಅಪಹರಿಸಿ ಪರಾರಿಯಾಗಿದ್ದಾರೆ.
ಮೈಸೂರಿನ ವಿರಾಜಪೇಟೆಯ ರಸ್ತೆಯ ಜನನಿಬಿಡ ರಸ್ತೆಯಲ್ಲಿ ಆಭರಣ ತಯಾರಕನ ಕಾರು ನಿಲ್ಲಿಸಿ ಚಿನ್ನ ಕದ್ದೊಯ್ದು ಪರಾರಿಯಾಗಿದ್ದು, 10-12 ಮಂದಿ ಇದ್ದರು ಎಂದು ವಿನು ತಿಳಿಸಿದ್ದಾರೆ. ಚಿನ್ನ ತರುವಾಗ ಚಾಲಕ ಸಮೀರ್ ಹಾಗೂ ವಿನು ಮಾತ್ರ ಇದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರು ದಾಖಲಾಗುತ್ತಿದ್ದಂತೆ ಚಾಮರಾಜನಗರ ಎಸ್ಪಿ ಡಾ.ಬಿ.ಟಿ.ಕವಿತಾ ಮೂಲೆಹೊಳೆ ಚೆಕ್ ಪೋಸ್ಟ್ಗೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಗುಂಡ್ಲುಪೇಟೆ ಠಾಣೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆಭರಣ ತಯಾರಕ ವಿನು ಚಿನ್ನದ ಬಗ್ಗೆ ಕೆಲವು ದಾಖಲೆಗಳನ್ನು ಸಲ್ಲಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಪೂರ್ವನಿಯೋಜಿತವಾಗಿ ಸಂಚು ರೂಪಿಸಿ ಚಿನ್ನ ಪಡೆಯುವ ಹಾಗೂ ಚಿನ್ನ ಸಾಗಾಟದ ಎಲ್ಲಾ ಮಾರ್ಗದ ಮಾಹಿತಿಯನ್ನು ಪಡೆದು ಪ್ಲಾನ್ ಮಾಡಿ ಕೃತ್ಯ ಮಾಡಿದ್ದಾರೆ. ಈ ಹಿಂದಿನ ದರೋಡೆ ಪ್ರಕರಣಗಳನ್ನು ಗಮನಿಸಿದರೆ ಕೇರಳದ ದರೋಡೆ ಗ್ಯಾಂಗ್ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದರು.




