ಬೆಂಗಳೂರು: ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಸಿಎಂ ಹುದ್ದೆ ಕುರಿತು ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ನಂತರ ಇಂದು ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಆಗಮಿಸಿದ ಡಿ ಕೆ ಶಿವಕುಮಾರ್, ಉಪಾಹಾರ ಸೇವಿಸಿದರು.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ನಂತರ ಸಿದ್ದರಾಮಯ್ಯ ಅವರೊಂದಿಗೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದರು.
ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಇರೋದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು. ಗುಂಪುಗಾರಿಕೆಗೆ ಹಿಂದೆಯೂ ಅವಕಾಶ ಕೊಡಲಿಲ್ಲ, ಈಗಲೂ ಕೊಡಲ್ಲ, ಅದರ ಅವಶ್ಯಕತೆಯೂ ಇಲ್ಲ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಅದು ನಮ್ಮ ಕರ್ತವ್ಯ ಎಂದರು.
ಪ್ರತಿಯೊಬ್ಬ ಶಾಸಕರನ್ನು, ಕಾರ್ಯಕರ್ತರನ್ನು ಮತ್ತು ನಮ್ಮ ಪಕ್ಷವನ್ನು ಶಕ್ತಿಶಾಲಿಯಾಗಿ ಬೆಳೆಸಬೇಕು. ಅದೂ ನಮ್ಮಿಬ್ಬರ ಕರ್ತವ್ಯ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಲು ಹಲವು ಕಾರ್ಯತಂತ್ರಗಳನ್ನು ರೂಪಿಸಿದ್ದೇವೆ ಎಂದರು.



