ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ಮಧ್ಯಂತರ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಮುದ್ಗಲ್ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ನ್ಯಾಯಪೀಠ ಮೇಲ್ಮನವಿ ವಜಾಗೊಳಿಸಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಅಲ್ಲದೆ, ಅರ್ಜಿದಾರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳು ಮತ್ತು ಅಪರಾಧದ ಗಂಭೀರತೆ ಪರಿಶೀಲಿಸಿರುವ ನ್ಯಾಯಪೀಠ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯ ಪಟ್ಟಿದೆ.
ಅರ್ಜಿದಾರರ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಈಗಾಗಲೇ ವಿಚಾರಣೆ ನಡೆದಿದ್ದು, ಮತ್ತೆ ಹೈಕೋರ್ಟ್ನಲ್ಲಿ ಸಾಕ್ಷಿಯ ವಿಚಾರಣೆ ನಡೆಸಲಾಗದು. ತೀರ್ಪಿನಲ್ಲಿನ ಅಲ್ಲೊಂದು ಇಲ್ಲೊಂದು ಇರುವ ಲೋಪಗಳನ್ನು ನೋಡಲಾಗದು. ಜೊತೆಗೆ, ಮೇಲ್ಮನವಿದಾರರಿಗೆ ವಿಧಿಸಿರುವ ಶಿಕ್ಷೆ ರದ್ದುಪಡಿಸಲು ಸಾಕ್ಷಿಗಳು ಅತ್ಯಂತ ದುರ್ಬಲವಾಗಿವೆ ಎಂದು ಅರ್ಜಿದಾರರ ಪರ ವಕೀಲರು ಸಾಬೀತುಪಡಿಸಿಲ್ಲ. ಇದೇ ಕಾರಣಕ್ಕಾಗಿ ಅವರ ಅವರ ವಾದವನ್ನು ಒಪ್ಪಲಾಗುತ್ತಿಲ್ಲ ಎಂದು ಪೀಠ ಹೇಳಿದೆ.
ಇದೇ ವೇಳೆ ಅರ್ಜಿದಾರರ ಪರ ವಕೀಲರ ವಾದವನ್ನು ಒಪ್ಪಲಾಗದು ಎಂದು ತಿಳಿಸಿರುವ ನ್ಯಾಯಪೀಠ, ಜಾಮೀನು ಕೋರಿದ್ದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಪ್ರಕರಣ ಸಂಬಂಧ ಈ ಹಿಂದೆ ನಡೆದಿದ್ದ ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು, ಪ್ರಜ್ವಲ್ ವಿರುದ್ಧ ರಾಜಕೀಯ ಪ್ರತೀಕಾರ, ಸಂತ್ರಸ್ತೆ ದೂರು ದಾಖಲಿಸಲು ವಿಳಂಬ ಮಾಡಿರುವುದು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿನ ವ್ಯತ್ಯಾಸ, ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿರುವ ಮೂಲ ಫೋನ್ ಅನ್ನು ತನಿಖಾಧಿಕಾರಿಗಳು ಜಪ್ತಿ ಮಾಡಿಲ್ಲ. ಬಸವನಗುಡಿಯ ಮನೆಗೂ ಪ್ರಜ್ವಲ್ ಹೋಗಿಲ್ಲ. ಸಂತ್ರಸ್ತೆಯು ಗನ್ನಿಗಢ ತೋಟದಲ್ಲಿ ಕೆಲಸವನ್ನೇ ಮಾಡಿಲ್ಲ. ವಂಶವಾಹಿ ಪರೀಕ್ಷೆಯನ್ನು ಕಾನೂನಿಗೆ ಅನ್ವಯವಾಗಿ ನಡೆಸಿಲ್ಲ ಎಂದು ವಾದ ಮಂಡಿಸಿದರು.
ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರ ಪ್ರೊ. ರವಿವರ್ಮ ಕುಮಾರ್, ಈ ಪ್ರಕರಣದಲ್ಲಿ ಪ್ರಜ್ವಲ್ ಶಿಕ್ಷೆ ಅಮಾನತುಪಡಿಸಿದರೆ ಉಳಿದ ಪ್ರಕರಣಗಳಲ್ಲಿ ಸಾಕ್ಷಿ ತಿರುಚುವ ಸಾಧ್ಯತೆ ಇದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದ್ದು, ವಾದ ಮಂಡಿಸಲು ಸಿದ್ಧವಾಗಿದ್ದೇವೆ. ಅಶ್ವನಿ ಕುಮಾರ್ ಉಪಾಧ್ಯಾಯ ಪ್ರಕರಣದಲ್ಲಿ ಜನಪ್ರತಿನಿಧಿಗಳು ಭಾಗಿಯಾಗಿರುವ ಆಜೀವ ಅಥವಾ ಜೀವಾವಧಿ ಶಿಕ್ಷೆಯ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಬೇಕು ಎಂದರು.
ಏನಿದು ಪ್ರಕರಣ?: ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಆಗಸ್ಟ್ 2ರಂದು ವಿಚಾರಣಾಧೀನ ನ್ಯಾಯಾಲಯ ಪ್ರಜ್ವಲ್ಗೆ ಜೀವನ ಪರ್ಯಂತ ಜೈಲು ಶಿಕ್ಷೆಯ ಜೊತೆಗೆ 11.60 ಲಕ್ಷ ದಂಡವನ್ನು ವಿಧಿಸಿತ್ತು. ಇದರಲ್ಲಿ ಸಂತ್ರಸ್ತೆಗೆ 11.25 ಲಕ್ಷವನ್ನು ಪರಿಹಾರದ ರೂಪದಲ್ಲಿ, ಬಾಕಿ ಹಣವನ್ನು ಸರ್ಕಾರದ ಖಾತೆಗೆ ಜಮೆ ನೀಡಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು



