ಬೆಳಗಾವಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಡಿನ್ನರ್ ಪಾಲಿಟಿಕ್ಸ್ ಗೆ ಪ್ರತಿಪಕ್ಷ ಬಿಜೆಪಿ ಕೆಂಡಾಮಂಡಲವಾಗಿದೆ. ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಸಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುತ್ತದೆ ಎಂದು ಭಾವಿಸಿದ್ದರೆ, ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಇದಕ್ಕಿಂತ ಕುರ್ಚಿ ಕಚ್ಚಾಟವೇ ಮುಖ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ನಾಯಕತ್ವದ ಸಮಸ್ಯೆ ಬಗೆಹರಿಸಿಕೊಂಡು, ನಂತರ ಬೆಳಗಾವಿ ಅಧಿವೇಶನಕ್ಕೆ ಬರಬೇಕು ಎಂದು ನಾವು ಮೊದಲೇ ತಾಕೀತು ಮಾಡಿದ್ದೇವು.10 ದಿನ ಮುಂಚಿತವಾಗಿ ಮತ್ತೆ ಸ್ಪಷ್ಟವಾಗಿ ಹೇಳಿದ್ದೆವು. ಆದರೆ ಅದನ್ನು ಬಿಟ್ಟು ಕುರ್ಚಿಗಾಗಿ ಕಚ್ಚಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯಕ್ಕೆ ಉತ್ತಮ ಆಡಳಿತ ನೀಡಬೇಕು ಎಂದು ಮತದಾರರು ಇವರಿಗೆ ಜನದೇಶ ನೀಡಿದ್ದಾರೆ, ಆದರೆ ಇವರು ಜನಾಧಿವೇಶನವನ್ನು ತಮ್ಮ ಕುರ್ಚಿ ಕಾಪಾಡುವ ಅಧಿವೇಶನ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಸಿದ್ದರಾಮಯ್ಯ ಅವರೇ ನೀವೇನು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಲ್ಲ. ಇಡೀ ರಾಜ್ಯದ ಮುಖ್ಯಮಂತ್ರಿ. ಇಷ್ಟೊಂದು ಗೊಂದಲ ಇಟ್ಟುಕೊಂಡು ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವುದು ಬೇಡ. ಅಧಿವೇಶನ ಮುಂದೂಡಿ ಎಂದು ಕೂಡ ಸಲಹೆ ನೀಡಿದ್ದೇವು ಎಂದರು.
ಕಳೆದ ನಾಲ್ಕು ತಿಂಗಳಿನಿಂದ ಪದೇಪದೇ ಡಿನ್ನರ್ ಮೀಟಿಂಗ್ ಮಾಡಿಕೊಂಡು ಬಂದಿದ್ದಾರೆ. ಇದೇ ಕಾರಣದಿಂದ ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ ಹೋಯಿತು. ರಾಜ್ಯದ ಜನರ ಸಮಸ್ಯೆಗಳ ಕುರಿತು ಚಿಂತನೆ ಮಾಡಲು ಈ ಸರ್ಕಾರ ಸಮಯ ಕೊಡಲಿಲ್ಲ. ಡಿನ್ನರ್, ಲಂಚ್ ಮೀಟಿಂಗ್ ನಲ್ಲಿ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತಾರೆ ಅಂದರೆ ಅದೂ ಇಲ್ಲ. ಕೇವಲ ತಮ್ಮ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ಮಾಡುತ್ತಿದ್ದಾರೆ ಎಂದರು.
ಡಿ.ಕೆ.ಶಿವಕುಮಾರ ನೇತೃತ್ವದ ತಂಡವು ಹೇಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಬೀಳಿಸಬೇಕು ಎಂದು ತಂತ್ರಗಾರಿಕೆ ರೂಪಿಸಲು ಮೀಟಿಂಗ್ ಮಾಡುತ್ತಿದೆ. ಇದರ ನಡುವೆ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು. ರೈತರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದರು.



