ಬೆಳಗಾವಿ: ಚುನಾಯಿತ ಮಂಡಳಿಗಳ ಅಧಿಕಾರಾವಧಿ ಮುಗಿದು ಒಂದು ತಿಂಗಳು ಕಳೆದಿರುವ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸೇರಿ ರಾಜ್ಯದ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂಖಾನ್ ವಿಧಾನ ಪರಿಷತ್ತಿನಲ್ಲಿ ಪ್ರಕಟಿಸಿದ್ದಾರೆ.
- ರಾಜ್ಯದ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸಲಾಗುವುದು: ರಹೀಂಖಾನ್
- ಹೆಚ್ಎಎಲ್ನಲ್ಲಿ ಮಾಜಿ ಸೈನಿಕರಿಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗಾವಕಾಶ
- ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ
- ಸತ್ಯ ಮತ್ತು ನ್ಯಾಯ ಸೇಡಿನ ರಾಜಕೀಯವನ್ನ ಸೋಲಿಸಿದೆ: ಬಿ ಕೆ ಹರಿಪ್ರಸಾದ್
- 1600 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ: ಜಿ ಪರಮೇಶ್ವರ್
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸ್ಥಳೀಯ ಸಂಸ್ಥೆಗಳ ವಾರ್ಡ್ ಗಳಿಗೆ ಮೀಸಲಾತಿ ನಿಗಧಿ, ಕ್ಷೇತ್ರ ಪುನರ್ ವಿಗಂಡಣೆ ಇನ್ನಿತರ ಕಾರಣಗಳಿಂದ ಚುನಾವಣೆ ನಡೆಸುವುದು ವಿಳಂಬವಾಗಿದೆ ಎಂದರು.
ಚುನಾವಣೆ ನಡೆಸುವ ಸಂಬಂಧ ಇಲಾಖೆ ಈಗಾಗಲೇ ಪ್ರಕ್ರಿಯೆ ಆರಂಭಿಸಿದೆ ಈ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಅದಷ್ಟು ಶೀಘ್ರ ಕ್ಷೇತ್ರ ಪುನರ್ ವಿಗಂಡಣೆ ಪೂರ್ಣಗೊಳಿಸಿ ಮೀಸಲಾತಿ ನಿಗದಿಪಡಿಸಿ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಅವಧಿ ಮುಕ್ತಾಯಗೊಂಡಿರುವ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ – ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ ದಿನನಿತ್ಯದ ಕಾರ್ಯನಿರ್ವಹಣೆಗಾಗಿ ಹಾಗೂ ನಗರ ಸ್ಥಳೀಯ – ಸಂಸ್ಥೆಗಳ ಆಡಳಿತ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ ಎಂದರು.
ನೇಮಕಾತಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ನೌಕರರನ್ನು ರಾಜ್ಯ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಿದ್ಧತೆ ನಡೆಸಲಾಗಿದೆ ಇದಕ್ಕಾಗಿ ಹಣಕಾಸು ಇಲಾಖೆಯ ಅನುಮತಿ ಕೋರಲಾಗಿದೆ ಎಂದು ಬಿಜೆಪಿಯ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದರು.
ನಗರ ಕೆಜಿಐಡಿ ಸ್ಥಳೀಯ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಸೇವಾ ನೌಕರರಿಗೆ ಜ್ಯೋತಿ ಸಂಜೀವಿನಿ ಸೌಲಭ್ಯಗಳನ್ನು ಒದಗಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ನಂತರ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.




