ಗೋರಕ್ಷಕರ ರಾಜ್ಯದಲ್ಲಿ ಗೋರಕ್ಷಣೆಗೆ ಅವಕಾಶವಿಲ್ಲದಂತಹ ಪರಿಸ್ಥಿತಿ ನಿರ್ಮಾಣ!

4 years ago

ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಗೋವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಆ.04 ರಂದು ದೀನದಯಾಳ್ ನಗರದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ವ್ಯಕ್ತಿಯ ಕ್ರಿಯೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ನಗರ ಎಸ್ ಪಿ ರವಿ ಬದೋರಿಯಾ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ರಾಷ್ಟ್ರೀಯ ಗೋರಕ್ಷ ವಾಹಿನಿಯ ವಿಭಾಗೀಯ ಅಧ್ಯಕ್ಷ ನೃಪತ್ ಸಿಂಗ್ ತೋಮರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಲು ಬಲೆ ಬೀಸಿದ್ದಾರೆ.

ವಿಶೇಷವೆಂದರೆ ಬಿಜೆಪಿ ಅಧಿಕಾರದಲ್ಲಿರುವ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಗೋಹತ್ಯ ನಿಷೇಧವನ್ನು ಜಾರಿಗೆ ತರಲಾಗಿದೆ. ಗೋವಾ ಮತ್ತು ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ವಿಷಯವನ್ನು ಬಿಜೆಪಿ ಪ್ರಸ್ತಾಪಿಸುವುದಿಲ್ಲ. ಮಧ್ಯಪ್ರದೇಶದಲ್ಲಿ “ಆಪರೇಷನ್ ಕಮಲ” ಮೂಲಕ ಅಧಿಕಾರಕ್ಕೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವನ್ನು ಕೊರೊನಾ ಆರಂಭದ ವೇಳೆ ಬಿಜೆಪಿ ಕೆಡವಿ ಅಧಿಕಾರ ಹಿಡಿದಿತ್ತು.

ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಗೋವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಆ.04 ರಂದು ದೀನದಯಾಳ್ ನಗರದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ವ್ಯಕ್ತಿಯ ಕ್ರಿಯೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ನಗರ ಎಸ್ ಪಿ ರವಿ ಬದೋರಿಯಾ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

Leave a Reply