ಮೈಸೂರು: ಸುದೀರ್ಘ ಅವಧಿಗೆ ರಾಜ್ಯದ ಮುಖ್ಯಮಂತ್ರಿ ಎಂಬ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡುತ್ತಿಲ್ಲ. ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮೈಸೂರಿನ ತಮ್ಮ ನಿವಾಸದಲ್ಲಿ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಮುಖಂಡರಿಂದ ಶುಭಾಶಯ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದರು.
ತಾವು ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.
ರಾಜ್ಯದ ಮುಖ್ಯಮಂತ್ರಿಯಾಗಿ ಐದು ವರ್ಷಗಳ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ. ಆದರೆ,ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು.
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದರು.
ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ ಅರಸು ಅವರು ನಿರಂತರವಾಗಿ 1972ರಿಂದ 80 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದರು ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.
ಹೊಸ ದಾಖಲೆ ನಿರ್ಮಾಣವಾಗುತ್ತಿರುವ ಸಂದರ್ಭ ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.




