ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನಿಲ್ಲ: ಸತೀಶ್ ಜಾರಕಿಹೊಳಿ

3 months ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಮಾತನಾಡಿ ಇನ್ನು ಮುಂದಾದರೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಚರ್ಚೆ ನಿಲ್ಲಬೇಕು ಎಂದರು.

ಬಜೆಟ್ ಮಂಡನೆ ನಂತರ ರಾಜ್ಯದ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ನಾನೆ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ ಹೀಗಾಗಿ ಈ ಬಗ್ಗೆ ಚರ್ಚೆ ಅನಗತ್ಯ ಎಂದರು.

ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನಿಲ್ಲ. ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಮಾತನಾಡಲು ಸಕಾಲ ಅಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಅವರ ನಿರ್ಧಾರಕ್ಕೆ ನಾವು ಕಾದು ನೋಡಬೇಕು ಎಂದರು.

Leave a Reply