ಕಾರವಾರ: ಜಿಲ್ಲೆಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರಯುವ ಸಂದರ್ಭದಲ್ಲಿ ಪ.ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಆದ್ಯತೆಯನ್ನು ನೀಡುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಹೊಸ ಪಡಿತರ ನ್ಯಾಯಬೆಲೆ ಅಂಗಡಿಯನ್ನು ನೀಡುವ ಸಂದರ್ಭದಲ್ಲಿ ಪ.ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಆದ್ಯತೆ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿನ ಪಡಿತರ ಚೀಟಿಗಳ ಸಂಖ್ಯೆಯಲ್ಲಿ ಪರಿಶೀಲಿಸಿ, ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರಯುವ ಕುರಿತಂತೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ.ಜಾತಿ ಪಂಗಡದ ಸಮುದಾಯದ ಶೇ.40 ಕ್ಕಿಂತಲೂ ಹೆಚ್ಚಿನ ಜನ ವಾಸವಿರುವ ಕಡೆಗಳಲ್ಲಿ ಪ.ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಆದ್ಯತೆಯ ಮೇಲೆ ಪಡಿತರ ಅಂಗಡಿಗಳನ್ನು ಮಂಜೂರು ಮಾಡುವಂತೆ ಹಾಗೂ ಪ.ಜಾತಿ ಸಮುದಾಯದಲ್ಲಿ ಮೀಸಲಾತಿಯನುಸಾರ ಒಳಮೀಸಲಾತಿಯನ್ನು ಅನುಸರಿಸುವಂತೆ ತಿಳಿಸಿದರು.
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯುವ ಕುರಿತಂತೆ ಪ್ರಕಟಣೆ ಹೊರಡಿಸುವ ಸಂದರ್ಭದಲ್ಲಿ ಪ.ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಮೀಸಲಿಟ್ಟಿರುವ ಅಂಗಡಿಗಳ ಸಂಖ್ಯೆಯನ್ನು ನಮೂದಿಸುವಂತೆ ತಿಳಿಸಿದರು.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ.ಜಾತಿ ಪಂಗಡದ ಸಮುದಾಯದ ಶೇ.40 ಕ್ಕಿಂತಲೂ ಹೆಚ್ಚಿನ ಜನ ವಾಸವಿರುವ ಪ್ರದೇಶಗಳ ಮಾಹಿತಿಯನ್ನು ಆಹಾರ ಇಲಾಖೆ ಅಧಿಕಾರಿಗಳಿಗೆ ಒದಗಿಸುವಂತೆ ಸಮಾಜ ಕಲ್ಯಾಣ ಮತ್ತು ಪ.ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಂಜುನಾಥ ರೇವಣ್ಕರ, ಪೌರಾಯುಕ್ತ ಜಗದೀಶ್ ಹುಲಿಗಜ್ಜಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಆಹಾರ ಇಲಾಖೆಯ ಎಲ್ಲಾ ತಾಲೂಕುಗಳ ಅಧಿಕಾರಿಗಳು ಹಾಜರಿದ್ದರು.




