ಶಿವನಗರ ವಾರ್ಡ್ ನಲ್ಲಿ 2000 ತ್ರಿವರ್ಣ ಧ್ವಜ ವಿತರಣಾ ಕಾರ್ಯಕ್ರಮ

4 years ago

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ, ಶಿವನಗರ ವಾರ್ಡ್ ನಲ್ಲಿ ಮಾಜಿ ಪಾಲಿಕೆ ಸದಸ್ಯರ ಕಛೇರಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ 2000ಸಾವಿರ ತ್ರಿರ್ವಣ ಧ್ವಜಾ ವಿತರಣಾ ಕಾರ್ಯಕ್ರಮ ನಡೆಯಿತು.
ಬಿ.ಬಿ.ಎಂ.ಪಿ. ಮಾಜಿ ಸದಸ್ಯೆ ಮಂಜುಳ ವಿಜಯಕುಮಾರ್, ಮಹಾನಗರ ಪಾಲಿಕೆ ಸದಸ್ಯ ವಿಜಯಕುಮಾರ್ ಸಾರ್ವಜನಿಕರಿಗೆ ತ್ರಿರ್ವಣ ಧ್ವಜಾಗಳನ್ನು ವಿತರಿಸಿದರು.
ಇದೇ ವೇಳೆ ಮಾತಾಡಿದ ಮಂಜುಳ ವಿಜಯಕುಮಾರ್, ಲಕ್ಷಾಂತರ ಜನರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಲಭಿಸಿತು. ಇಂದು ಸ್ವಾತಂತ್ರ್ಯ ಲಭಿಸಿ 75 ವರ್ಷಾಚರಣೆ ಸಮಾರಂಭ. ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಜೀವನವನ್ನ ಮುಡಿಪಾಗಿಟ್ಟು, ಬ್ರಿಟಿಷರ ವಿರುದ್ದ ಹೋರಾಟ ಮಾಡಿ ನಮಗೆ ಸ್ವಾತಂತ್ರ್ಯ ಸಿಗುವಂತೆ ಮಾಡಿದರು ಎಂದರು.
ತ್ಯಾಗ, ಬಲಿದಾನ ಮಾಡಿದ ಮಹನೀಯರುಗಳ ಜೀವನ ಆದರ್ಶಗಳನ್ನು ಇಂದಿನ ಯುವ ಸಮೂಹ ಜೀವನದಲ್ಲಿ ಆಳವಡಿಸಿಕೊಳ್ಳಬೇಕು. ಶಿವನಗರ ವಾರ್ಡ್ ನಲ್ಲಿ ಸಾರ್ವಜನಿಕರು ತಮ್ಮ ಮನೆಯ ಮೇಲೆ ತ್ರಿರ್ವಣ ಧ್ವಜ ಹಾರಿಸಲು 2000 ತ್ರಿರ್ವಣ ಧ್ವಜಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.

Leave a Reply