ಚಿತ್ರದುರ್ಗ: ಪದವಿ ಅಥವಾ ಡಿಪ್ಲೊಮೊ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗಾಗಿ ‘ದೀಪಿಕಾ ವಿದ್ಯಾರ್ಥಿವೇತನ” ಯೋಜನೆಯಡಿ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ದೀಪಿಕಾ ವಿದ್ಯಾರ್ಥಿ ವೇತನವು ಕರ್ನಾಟಕ ಸರ್ಕಾರ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಭಾರತದಲ್ಲಿ ಬಾಲಕಿಯರ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಲಾದ ಯೋಜನೆಯಾಗಿದೆ.
ಈ ಯೋಜನೆಯಲ್ಲಿ ವಿದ್ಯಾರ್ಥಿನಿಯರಿಗೆ ವಾರ್ಷಿಕ ರೂ.30,000/- ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು ಅವರ ಮೊದಲ ಪದವಿ ಅಥವಾ ಡಿಪ್ಲೊಮೊ ಕಾರ್ಯಕ್ರಮದ ಪೂರ್ಣ ಅವಧಿಗೆ ನೀಡಲಾಗುವುದು.
ಆಸಕ್ತ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, 10ನೇ ತರಗತಿ ಹಾಗೂ 12ನೇ ತರಗತಿಯ ಅಂಕಪಟ್ಟಿ, 2025-26ನೇ ಸಾಲಿಗೆ ಪ್ರಥಮ ವರ್ಷದ ಪದವಿ ಅಥವಾ ಡಿಪ್ಲೊಮೊಗೆ ದಾಖಲಾಗಿರುವ ಬಗ್ಗೆ ಬೋನೋಫೈಡ್ (ದಾಖಲಾತಿ ನೈಜತೆ ಪ್ರಮಾಣ ಪತ್ರ) ಅಥವಾ ಬೋಧನಾ ಶುಲ್ಕದ ರಸೀದಿ, ಭಾವಚಿತ್ರ, ಸಹಿ ಅರ್ಜಿಯೊಂದಿಗೆ ಜ.30ರ ಒಳಗಾಗಿ ಅರ್ಜಿ ಸಲ್ಲಿಸಬಹುದು.




