ಬೆಂಗಳೂರು: ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
ದಕ್ಷಿಣ ಭಾರತ ಸಮಾಜವಾದಿಗಳ ಸಮಾಜವಾದಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ವ್ಯವಸ್ಥೆ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ. ಇದರಿಂದ ರಾಜ್ಯಗಳಿಗೆ ಕೇಂದ್ರದಿಂದ ಬರಬೇಕಾದ ಅನುದಾನ ಕಡಿಮೆಯಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೆಚ್ಚು ಅನ್ಯಾವವಾಗುತ್ತಿದ್ದು, ಇದನ್ನು ಪ್ರಜಾಸತ್ತಾತ್ಮಕವಾಗಿಯೇ ಪ್ರಶ್ನಿಸಬೇಕಾಗಿದೆ ಎಂದರು.
ಕರ್ನಾಟಕ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ನೀಡುವ ರಾಜ್ಯಗಳಲ್ಲಿ ಒಂದು. ಆದರೆ ನಮಗೆ ಕೇಂದ್ರದಿಂದ ಬರುತ್ತಿರುವ ಅನುದಾನದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಈಗ ಮನರೇಗ ಯೋಜನೆ ಮೂಲಕ ನೀಡುತ್ತಿದ್ದ ಅನುದಾನದ ಪ್ರಮಾಣ ತಗ್ಗಿಸಿದ್ದು, ರಾಜ್ಯಗಳ ಆರ್ಥಿಕ ವ್ಯವಸ್ಥೆಗದ ಹೊಡೆತ ಬೀಳಲಿದೆ ಎಂದರು.
ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡುವ ಮೂಲಕ ದಕ್ಷಿಣ ರಾಜ್ಯಗಳ ವ್ಯಾಪ್ತಿಯ ಕ್ಷೇತ್ರಗಳ ಪ್ರಮಾಣ ಕಡಿಮೆ ಮಾಡಿ ಹಿಂದಿ ಭಾಷೆ ಪ್ರಾಬಲ್ಯ ಇರುವ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವ ಹುನ್ನಾರ ನಡೆದಿದೆ. ಇದನ್ನು ಬಲವಾಗಿ ವಿರೋಧಿಸಿ ನಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ ಎಂದರು.




