ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ನಾಯಕರ ವಿಭಿನ್ನ ಹೇಳಿಕೆಗಳ ಕುರಿತಂತೆ ವ್ಯಂಗ್ಯ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಜ್ಯ ಕಾಂಗ್ರೆಸ್ನಲ್ಲಿ ಭಿನ್ನ ಗಾಳಿ ಬೀಸುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸ್ವಿಟ್ಜರ್ಲೆಂಡ್ನ ಡಾವೋಸ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ‘India is Rising’ ಎಂದು ಹೇಳುತ್ತಿದ್ದಾರೆ. ಜಾಗತಿಕ ನಾಯಕರು, ಹೂಡಿಕೆದಾರರು ಮತ್ತು ಸಂಸ್ಥೆಗಳು ಏನು ಹೇಳುತ್ತಿವೆಯೋ ಖಚಿತವಾಗಿ ಅದರ ಪ್ರತಿಧ್ವನಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತದ್ದು ಸತ್ತ ಆರ್ಥಿಕತೆ ಎಂದು ಬಡಬಡಾಯಿಸುತ್ತಿದ್ದಾರೆ ಎಂದು ಅಶೋಕ ವ್ಯಂಗ್ಯ ಮಾಡಿದ್ದಾರೆ.
ಆದರೆ, ಈ ಮಾತುಗಳು ಬಾಯಿತಪ್ಪಿ ಬಂದಂತೆ ಕಾಣುತ್ತಿಲ್ಲ. ಕಾಂಗ್ರೆಸ್ನಲ್ಲಿ ಬಣ ಹುಟ್ಟಿಕೊಂಡಂತಿದೆ. ಒಬ್ಬೊಬ್ಬರು ಒಂದೊಂದು ರೀತಿ ಮತ್ತು ವಿಭಿನ್ನ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಏಕೆ ಅಸಮಾಧಾನಗೊಂಡಿದ್ದಾರೆ ಎಂಬುದು ನಮ್ಮೆಲ್ಲರಿಗೂ ತಿಳಿದಿದೆ. ಹೈಕಮಾಂಡ್ ನೀಡಿದ್ದ ಅಧಿಕಾರ ಹಂಚಿಕೆ ಭರವಸೆ ಹುಸಿಯಾಗಿದೆ. ಅವರ ತಾಳ್ಮೆಯ ಕಟ್ಟೆ ಒಡೆಯುತ್ತಿದೆ. ಈಗ ಅವರ ಮಾತಿನ ಧಾಟಿ ಬೇರೆಯಾಗಿದ್ದು, ವಾಸ್ತವವನ್ನು ಬಿಂಬಿಸುತ್ತಿದೆ. ರಾಹುಲ್ ಏನನ್ನು ಕೇಳಲು ಬಯಸುವುದಿಲ್ಲವೋ ಅದನ್ನೇ ಡಿಕೆಶಿ ಹೇಳುತ್ತಿದ್ದಾರೆ ಎಂದು ಅಶೋಕ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ದೆಹಲಿ ಘೋಷ ವಾಕ್ಯಗಳನ್ನು ಇಟ್ಟುಕೊಂಡು ಕರ್ನಾಟಕ ರಾಜಕೀಯವನ್ನು ನಡೆಸಲು ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್, ಸೌಮ್ಯವಾಗಿಯೇ ರಾಹುಲ್ ಗಾಂಧಿಗೆ ಹೇಳುತ್ತಿದ್ದಾರೆಯೇ? ಅಥವಾ ರಾಹುಲ್ ಗಾಂಧಿಯವರ ನಿರಾಶಾವಾದಕ್ಕಿಂತ ಮೂಲ ನಿರೂಪಣೆ ಮುಖ್ಯ ಎಂಬುದರ ಸೂಕ್ಷ್ಮ ಸಂಕೇತವೇ ಇದು? ಎಂದು ಕುಟುಕಿದ್ದಾರೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಕೇಂದ್ರೀಯ ನಾಯಕರ ಘೋಷವಾಕ್ಯಕ್ಕೆ ತದ್ವಿರುದ್ಧವಾಗಿ ಜಾಗತಿಕ ಮಟ್ಟದಲ್ಲಿ ಹೇಳಿಕೆ ನೀಡುತ್ತಾರೆ ಎಂದರೆ ಇದು ಖಂಡಿತಾ ಆಕಸ್ಮಿಕ ಅಥವಾ ಕಾಕತಾಳೀಯವಲ್ಲ. ಇದು ಸ್ಪಷ್ಟ ಸಂದೇಶ ಎಂದಿದ್ದಾರೆ.




