ಬೆಂಗಳೂರು: ವಿದ್ಯಾರ್ಥಿ ಜೀವನದ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಬಾರಿಯ ಪರೀಕ್ಷೆಗಳು ಮಾರ್ಚ್ 5ರಿಂದ ಆರಂಭಗೊಂಡು ಮಾರ್ಚ್ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ.
ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ದಿನಾಂಕ ಮತ್ತು ಫಲಿತಾಂಶದ ದಿನಾಂಕವನ್ನು ಸಾಕಷ್ಟು ಮುಂಚಿತವಾಗಿಯೇ ಪ್ರಕಟಿಸಿರುವುದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಳತೆ ತಂದಿದೆ. ಇದರಿಂದ ವಿದ್ಯಾರ್ಥಿಗಳು ತಮ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಲು ಮತ್ತು ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ಸಹಕಾರಿಯಾಗಲಿದೆ.
ಮಾರ್ಚ್ 5ರಂದು ಪ್ರಥಮ ಭಾಷಾ ವಿಷಯಗಳೊಂದಿಗೆ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 30ರಂದು ತೃತೀಯ ಭಾಷಾ ವಿಷಯಗಳೊಂದಿಗೆ ಮುಕ್ತಾಯಗೊಳ್ಳಲಿದೆ. ರಾಜ್ಯಾದ್ಯಂತ ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಹದ್ದಿನ ಕಣ್ಣಿಡಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.ಸಾಮಾನ್ಯವಾಗಿ ಪರೀಕ್ಷೆ ಮುಗಿದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ದೀರ್ಘಕಾಲ ಕಾಯಬೇಕಾಗಿತ್ತು. ಆದರೆ, ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮಂಡಳಿ ನಿರ್ಧರಿಸಿದೆ.
ಪರೀಕ್ಷೆ ಮುಗಿದ ತಕ್ಷಣ ಏಪ್ರಿಲ್ ತಿಂಗಳಿನಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಮೇ 8ರಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ಸ್ಪಷ್ಟಪಡಿಸಿದೆ.
ಇದು ಮುಂದಿನ ತರಗತಿಗಳ ಪ್ರವೇಶ ಪ್ರಕ್ರಿಯೆಗೆ ಅನುಕೂಲವಾಗಲಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸಾರ್ಟ್ ವಾಚ್, ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.




