ಸಾರಿಗೆ ನಿಗಮಗಳ ನೌಕರರ ಮುಷ್ಕರ

2 months ago

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌‍ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ.20ರಂದು ರಾಜ್ಯಾದ್ಯಾಂತ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಸಾರಿಗೆ ನೌಕರರ ಮುಖಂಡ ಅನಂತ್‌ ಸುಬ್ಬರಾವ್‌ ನಿಧನದ ಹಿನ್ನೆಲೆ ಕಳೆದ ಬಾರಿ ಬೆಂಗಳೂರು ಚಲೋ ಮುಂದೂಡಿಕೆ ಮಾಡಲಾಗಿತ್ತು. ಆದರೆ ಈ ಬಾರಿ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಹೇಳಿದೆ.

ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.

ಹಿಂದೆ ರಾಜ್ಯ ಸರ್ಕಾರದೊಂದಿಗೆ ಸಾರಿಗೆ ನೌಕರರು ಈಗಾಗಲೇ ಕೆಲವು ಬಾರಿ ಮಾತುಕತೆ ನಡೆಸಲಾಗಿತ್ತು. ಆದರೆ ಸರ್ಕಾರ ಭರವಸೆ ನೀಡಿತೇ ವಿನಾ ಬೇಡಿಕೆ ಈಡೇರಿಕೆಗೆ ಮುಂದಾಗಿಲ್ಲ. 2024 ಜನವರಿ 1ರಿಂದ ಜಾರಿಗೆ ಬರಬೇಕಿದ್ದ ವೇತನ ಪರಿಷ್ಕರಣೆ ಜಾರಿಗೆ ಬಂದಿಲ್ಲ. ವೇತನ ಹೆಚ್ಚಳ ಹಿಂಬಾಕಿ ಇದುವರೆಗೂ ನೌಕರರ ಕೈ ಸೇರಿಲ್ಲ. ಹೀಗಾಗಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.

Leave a Reply