ಭ್ರಷ್ಟಾಚಾರಕ್ಕೆ ಪ್ರಧಾನಿಗಳ ಮೌನ ಸಮ್ಮತಿಯೂ ಇದ್ದಂತಿದೆ: ಎಂ.ಬಿ.ಪಾಟೀಲ್

4 years ago

ಬೆಂಗಳೂರು: ಪಕ್ಷದ ಎಲ್ಲಾ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ನನ್ನನ್ನು ಪ್ರಚಾರ ಸಮಿತಿ ಅಧ್ಯಕ್ಷನಾಗಿ ಮಾಡಿದ್ದಾರೆ. ಪಕ್ಷದ ನಾಯಕರೆಲ್ಲರೂ ಚರ್ಚಿಸಿ ಕಾಂಗ್ರೆಸ್ ಸಾಧನೆಗಳು, ಕೊಡುಗೆಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ರೂಪಿಸುತ್ತೇವೆ. ರಾಜ್ಯದಲ್ಲಿ ಇದುವರೆಗಿನ ಕಾಂಗ್ರೆಸ್ ಸರ್ಕಾರಗಳ ಕೊಡುಗೆಗಳನ್ನು ಪ್ರಚಾರ ಮಾಡುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು.

ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು. ಉದ್ಯೋಗ ಸೃಷ್ಟಿ, ಕಪ್ಪು ಹಣ ತರುವುದು, ರೈತರ ಆದಾಯ ಡಬಲ್ ಮಾಡುವಲ್ಲಿನ ಅವರ ವಚನ ಭ್ರಷ್ಟತೆಯ ಬಗ್ಗೆ ಹೇಳುತ್ತೇವೆ. ನೋಟು ರದ್ಧತಿ, ಅವೈಜ್ಞಾನಿಕ ಜಿಎಸ್‌ಟಿ ಯಂತಹ ತಪ್ಪು ನೀತಿಗಳಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದರು.

ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲದ ಮೂಲಕ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿತು.
ಈ ಸರ್ಕಾರದಲ್ಲಿ 40% ಭ್ರಷ್ಟಾಚಾರ ನಡೆಯುತ್ತಿದೆ. ಪ್ರಧಾನಿಗಳಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪತ್ರ ಬರೆದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.
ಐಟಿ, ಇಡಿ, ಸಿಬಿಐ ದಾಳಿ ಆಗಿಲ್ಲ. ಇವರ ಭ್ರಷ್ಟಾಚಾರಕ್ಕೆ ಪ್ರಧಾನಿಗಳ ಮೌನ ಸಮ್ಮತಿಯೂ ಇದ್ದಂತಿದೆ ಎಂದರು.

Leave a Reply