ರಾಯಚೂರು: ಇನ್ನೂ 2 ವರ್ಷಗಳ ಕಾಲ ಮತದಾರರ ಸೇವೆ ಮಾಡಲು ಮಾಜಿ ಶಾಸಕ ಪ್ರತಾಪಗೌಡ ಪಾಟೀಲಗೆ ಅವಕಾಶ ಇತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ ಲೋಕಸಭೆ ಉಪಚುನಾವಣಾ ಅಭ್ಯರ್ಥಿಯಾಗಿರುವ ಅವರು, ಮಸ್ಕಿಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತಾನಾಡಿ, ದುಡ್ಡಿನ ಆಮಿಷ ಹಾಗೂ ಮಂತ್ರಿ ಸ್ಥಾನದ ಆಸೆಗಾಗಿ ಅವರು ಮಾತೃಪಕ್ಷಕ್ಕೆ ದ್ರೋಹ ಬಗೆದು, ಬೇರೆ ಪಕ್ಷಕ್ಕೆ ಹೋಗಿದ್ದಾರೆ. ಮತದಾರರಿಗೂ ಅವರು ದ್ರೋಹ ಮಾಡಿದ್ದಾರೆ. ಉಪಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಮತದಾರರಿಗೆ ಕರೆನೀಡಿದರು.
ಇದೇ ಶನಿವಾರ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ, ಗೆಲ್ಲಿಸಬೇಕು ಎಂದು ಮನವಿ ಮಾಡಿದರು.




