ಫೆಮಿನಾ ಮಿಸ್ ಇಂಡಿಯಾ-2026 ಕಿರೀಟ ವಿಜೇತೆ ಸಾಧ್ವಿ ಸೈಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ

4 days ago

ಬೆಂಗಳೂರು: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ-2026” ಸ್ಪರ್ಧೆಯಲ್ಲಿ ಕಿರೀಟ ಮುಡಿಗೇರಿಸಿಕೊಂಡ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಭೇಟಿಯ ವೇಳೆ ಸಾಧ್ವಿ ಸೈಲ್ ಅವರ ಸಾಧನೆಯನ್ನು ಶ್ಲಾಘಿಸಿದ ಸಿದ್ದರಾಮಯ್ಯ ಅವರು, ಭವಿಷ್ಯದಲ್ಲೂ ಇನ್ನಷ್ಟು ಯಶಸ್ಸು ಮತ್ತು ಕೀರ್ತಿ ಲಭಿಸಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಸತೀಶ್ ಸೈಲ್, ರಿಜ್ವಾನ್ ಅರ್ಷದ್, ಯಾಸೀರ್ ಖಾನ್ ಪಠಾಣ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ ಪರಿಷತ್ ಸದಸ್ಯ ಐವಾನ್ ಡಿಸೋಜಾ ಉಪಸ್ಥಿತರಿದ್ದರು.

Leave a Reply