
ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಪೂರ್ಣ: ಪ್ರಿಯಾಂಕ್ ಖರ್ಗೆ
ಕಲಬುರಗಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಜ್ಜಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಮೊದಲ ಹಂತವಾಗಿ ಕ್ಷೇತ್ರಗಳ ಮರುವಿಂಗಡಣೆ ಕುರಿತು ಆಕ್ಷೇಪಣೆ ಆಹ್ವಾನಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು. ವರ್ಷದ ಅಂತ್ಯದೊಳಗೆ ಜಿಲ್ಲಾ ಪಂಚಾಯತ್ (ಜಿಪಂ) ಹಾಗೂ ತಾಲೂಕು ಪಂಚಾಯತ್ (ತಾಪಂ) ಚುನಾವಣೆಗಳನ್ನು ನಡೆಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಹೇಳಿದರು.



