ಕ್ಯಾನ್ಸರ್ ವೇದನೆ ತಾಳಲಾರದೆ ಖ್ಯಾತ ವೈದ್ಯ ಆತ್ಮಹತ್ಯೆ; ಬೆಳಗಾವಿಯಲ್ಲಿ ಮನಕಲಕುವ ಘಟನೆ

1 week ago

ಬೆಳಗಾವಿ: ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿ ಜೀವ ಉಳಿಸಿದ್ದ ಖ್ಯಾತ ವೈದ್ಯರೊಬ್ಬರು ಕ್ಯಾನ್ಸರ್ ಕಾಯಿಲೆಯ ನೋವಿಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮೃತರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಡಾ. ದಿನೇಶ ಲಕ್ಷ್ಮಣ ಭಟ್ಕಳ ಎಂದು ಗುರುತಿಸಲಾಗಿದೆ. ಅವರು ಮಂಡೋಲಿ ರಸ್ತೆಯಲ್ಲಿರುವ ತಮ್ಮ ನಿವಾಸದ ಗ್ಯಾಲರಿಯಲ್ಲಿ ಗನ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಡಾ. ದಿನೇಶ ಭಟ್ಕಳ ಅವರು ಕೆಲಕಾಲದಿಂದ ಲಂಗ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಾಯಿಲೆಯಿಂದ ಉಂಟಾದ ತೀವ್ರ ಮಾನಸಿಕ ಹಾಗೂ ದೈಹಿಕ ವೇದನೆ ಹಿನ್ನೆಲೆ ಈ ಕೃತ್ಯಕ್ಕೆ ಮುಂದಾಗಿರಬಹುದೆಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಟಿಳಕವಾಡಿ ಠಾಣೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply