ದೇವೇಗೌಡರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಳಕಳಿ ವ್ಯಕ್ತಪಡಿಸಿದ್ದು, ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
- ಪೆರಿಯಾರ್ ಹೋರಾಟ ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ
ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌಡರ ನಿವಾಸಕ್ಕೆ ಭೇಟಿ ನೀಡಿ ಮೃತರ ಪಾರ್ಥಿವ ಶರೀರದ ದರ್ಶನ ಪಡೆದು, ಭಾವಪೂರ್ಣ ಅಂತಿಮ ನಮನ ಸಲ್ಲಿಸಿದರು.
ಚೆನ್ನಮ್ಮನವರ ಅಗಲಿಕೆಯಿಂದ ತೀವ್ರ ದುಃಖಿತರಾಗಿರುವ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಅವರು, ಸಾಂತ್ವನ ಹೇಳಿದರು. ತಾಯಿಯನ್ನು ಕಳೆದುಕೊಂಡು ದುಃಖತಪ್ತರಾಗಿರುವ ಇಡೀ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಆಶಿಸಿದರು.








