ಮಾಚಿದೇವ ಅಭಿವೃಧ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

2 months ago

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃಧ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.



ಧಾರವಾಡ: 2026-27ನೇ ಸಾಲಿಗೆ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃಧ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಆಧುನಿಕ ಲಾಂಡ್ರಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2024-25 ಮತ್ತು 2025-26 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಮಡಿವಾಳ ಸಮುದಾಯ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸಪೆಂ್ಟಬರ್ 27, 2026 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ www.kmmdc.karnataka.gov.in ನಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ.

ಜಿಲ್ಲಾ ಕಛೇರಿ ಸಹಾಯವಾಣಿ 0836-2957829 ಗೆ ಸಂಪರ್ಕಿಸಬಹುದು.

Leave a Reply