ಬೆಂಗಳೂರು: ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ನನ್ನನ್ನು ಭೇಟಿಯಾಗಿ 12ರೂ. ಹೆಚ್ಚಳ ಮಾಡಿ. ಅದರಲ್ಲಿ 2 ರೂ. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು, ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.
ಹಾಲಿನ ಪ್ರಸ್ತುತ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದೆ. 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದರು.




