ಬೆಂಗಳೂರು: ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿ ಅವರ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿಯಾಗಿದೆ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ BJP Karnataka. ಮುಖ್ಯಮಂತ್ರಿ Basavaraj Bommai ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ? ಎಂದು ಕೆಪಿಸಿಸಿ ಪ್ರಶ್ನಿಸಿದೆ.
ಅಹವಾಲು ನೀಡಲು ಬಂದ ಮಹಿಳೆಯ ಮೇಲೆ ಕಿಡಿಕಾರಿದ್ದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಪಿಸಿಸಿ,
◆ ಮಹಿಳೆಯನ್ನು ನಿಂದಿಸಿದ್ದರು ಮಾಧುಸ್ವಾಮಿ
◆ ಮಹಿಳಾ ಜನಪ್ರತಿನಿಧಿ ಮೇಲೆ ಹಲ್ಲೆ ಮಾಡಿದ್ದರು ಸಿದ್ದು ಸವದಿ
◆ ಉದ್ಯೋಗ ಕೇಳಿದ ಯುವತಿಯನ್ನು ಮಂಚ ಹತ್ತಿಸಿದ್ದರು ರಮೇಶ್ ಜಾರಕಿಹೊಳಿ
◆ ಅತ್ಯಾಚಾರ ಸಂತ್ರಸ್ತೆಯದ್ದೇ ತಪ್ಪು ಎಂದಿದ್ದರು ಅರಗ ಜ್ಞಾನೇಂದ್ರ
◆ ಮಹಿಳೆಯ ಮೇಲೆ ದರ್ಪ ಮೆರೆದರು ಅರವಿಂದ್ ಲಿಂಬಾವಳಿ
ಇದೇನಾ ಬಿಜೆಪಿಯ ಸ್ತ್ರೀಗೌರವದ ಸಂಸ್ಕೃತಿ? ಎಂದು ಪ್ರಶ್ನಿಸಿದೆ.
ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ,
ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ..
ನಿಮ್ಮ ಪಕ್ಷದ ಶಾಸಕರಾದ ಅರವಿಂದ್ ಲಿಂಬಾವಳಿ ಅವರ ಮಹಿಳೆಯ ಮೇಲಿನ ದೌರ್ಜನ್ಯದ ವಿರುದ್ಧ ರೊಚ್ಚಿಗೇಳುವುದು ಯಾವಾಗ? ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ? ಎಂದು ಕೇಳಿದೆ.
Nalin Kumar Kateel ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುತ್ತೀರಾ ಅಥವಾ ಇದೇ ಬಿಜೆಪಿಯ ಸಂಸ್ಕೃತಿ ಎಂದು ಸುಮ್ಮನಿರುತ್ತೀರಾ? ಎಂದು ಪ್ರಶ್ನಿಸಿದೆ.



