ಮೈಸೂರು ಕಾರ್ಯಕ್ರಮದ ಬಳಿಕ ದೆಹಲಿಗೆ ಡಿಕೆಶಿ
ಸಚಿವ ಸ್ಥಾನದ ವಿಶ್ವಾಸದಲ್ಲಿ ಎಂ. ಕೃಷ್ಣಪ್ಪ
ಬೆಂಗಳೂರು: ವಿದೇಶ ಪ್ರವಾಸದಿಂದ ಮರಳಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಇಂದು ಮೈಸೂರಿನಲ್ಲಿ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಬಳಿಕ ದೆಹಲಿಗೆ ತೆರಳುವ ಸಾಧ್ಯತೆ ಇದೆ. ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದ ನಂತರ, ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುನ್ನ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳಿಸಿ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲು ತೀರ್ಮಾನಿಸಿದ್ದಾರೆ.
- ಪ್ರತ್ಯೇಕ ಮಹಿಳಾ ಮತ್ತು ಮಕ್ಕಳ ಸೈಬರ್ ರಕ್ಷಣೆ ದಳ ಸ್ಥಾಪನೆ
- ಮನವಿಗೆ ಸ್ಪಂದಿಸದಿದ್ದರೆ ಕಾನೂನು ಹೋರಾಟ: ಡಾ.ಜಿ.ಪರಮೇಶ್ವರ್
- ಜಿಲ್ಲಾ, ತಾಲೂಕು ಪಂಚಾಯಿತಿಗಳಿಗೆ ಜನವರಿಯಲ್ಲಿ ಚುನಾವಣೆ: ಈಶ್ವರ್ ಖಂಡ್ರೆ
- ‘ಸ್ಮೋಕಿಂಗ್ ಫ್ರೀ ಝೋನ್’ ಜಾರಿಗೆ ತರಲು ಪ್ರಸ್ತಾವನೆ ಸಿದ್ಧ
- ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧ: ಡಿ.ಕೆ.ಶಿವಕುಮಾರ್
ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿ ಹಾಗೂ ಹಿರಿಯ ನಾಯಕ ಎಂ. ಕೃಷ್ಣಪ್ಪ ಅವರು, ಈ ಬಾರಿ ತಮಗೆ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದು, ಪಕ್ಷ ತಮ್ಮನ್ನು ಕೈಬಿಡುವುದಿಲ್ಲ ಎಂದರು. ತಾವು ಯಾವುದೇ ಕಾಯುವ ಪಟ್ಟಿಯಲ್ಲಿಲ್ಲ, 2004ರಿಂದಲೂ ಪಕ್ಷದ ಕಟ್ಟಾಳುವಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದರು.
ಬಿಜೆಪಿ ಆಡಳಿತಾವಧಿಯಲ್ಲೂ ಪ್ರಿಯಕೃಷ್ಣ ಗೆಲುವು ಸಾಧಿಸಿದ್ದರು; ಪ್ರಸ್ತುತ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತಾವು, ಪ್ರಿಯಕೃಷ್ಣ ಹಾಗೂ ರಾಮಲಿಂಗಾರೆಡ್ಡಿ ಉತ್ತಮ ಸಾಧನೆ ಮಾಡಿದ್ದೇವೆ ಎಂದರು. ಈ ಹಿಂದೆ ಸಚಿವ ಸ್ಥಾನ ದೊರೆತಿದ್ದು, ಈಗ ಸಿಗದಿರುವುದಕ್ಕೆ ಯಾವುದೇ ಅಸಮಾಧಾನವಿಲ್ಲ ಹಾಗೂ ಪಕ್ಷ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.




