ಬೆಂಗಳೂರು: ಕಾಂಗ್ರೆಸ್ ಪಕ್ಷ ಬಡವರ, ದೀನದಲಿತರ ಪರ ಹೋರಾಟ ಮಾಡುವ ಪಕ್ಷ ಎಂದು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎನ್.ರಾಧಾಕೃಷ್ಣ ಹೇಳಿದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರ, ಬಸವೇಶ್ವರನಗರ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎನ್.ರಾಧಾಕೃಷ್ಣ ಅವರ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಅಭಿಮಾನಿಗಳು, ಸ್ನೇಹಿತರು ಅಚರಿಸಿದರು. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ನೇಹಿತರು, ಸ್ಥಳೀಯರು ಆಗಮಿಸಿ ಟಿ.ಎನ್.ರಾಧಕೃಷ್ಣರವರಿಗೆ ಶುಭ ಕೋರಿ, ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಮಾತಾಡಿದ ಟಿ.ಎನ್.ರಾಧಾಕೃಷ್ಣ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮೇಯರ್ ಜಿ.ಪದ್ಮಾವತಿಯವರ ನೇತೃತ್ವದಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಯುತವಾಗಿದೆ ಎಂದರು.
ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಭಾರತ್ ಜೊಡೋ ಕಾರ್ಯಕ್ರಮ ರಾಜ್ಯದಲ್ಲಿ ಭಾರತ ಐಕ್ಯತಾ ಪಾದಯಾತ್ರೆ ಯಶ್ವಸಿಯಾಗಿ ಜರುಗುತ್ತಿದೆ ಎಂದರು.
ಅಡುಗೆ ಆನಿಲ, ಆಹಾರ ಪದಾರ್ಥ ಮತ್ತು ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮತ್ತು ನಿರುದ್ಯೋಗ, ಆರ್ಥಿಕ ಕುಸಿತದಿಂದ ದೇಶದ ಜನರು ಸಂಕಷ್ಟದಲ್ಲಿ ಇದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿ.ಜೆ.ಪಿ. ಜನವಿರೋಧಿ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದೆ, ಮುಂಬರುವ ವಿಧಾನಸಭೆ ಮತ್ತು ಬಿ.ಬಿ.ಎಂ.ಪಿ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.




