ದೈವದ ವೇಷ ಧರಿಸುವವನನ್ನು ಅಸ್ಪೃಶ್ಯನೆಂದು ಮನೆಯೊಳಗೆ ಸೇರಿಸದಿರುವುದು ಧರ್ಮವೇ?

4 years ago

ಕಾಂತಾರ ಮತ್ತು ಧರ್ಮ
ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ??
ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿಹೋದೀತು.
ಕೇವಲ ಓಟಿಗಾಗಿ ಪಟೇಲ್ ಗಾಂಧಿ ಬೋಸ್ ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರ ಗೀತೆ, ಧ್ವಜ,ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ.
ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ.

– ಕಿಶೋರ್, ನಟ

Kantara and Dharma
A request of concern to those who are painting the color of Dharma on our Folk deities, the Bhoota of kola and the Daiva of Nema. Why do we fail to see the color of Adharma in the practice of untouchability, which does not allow the person who wears the vesha of the same daiva into the house belonging to the upper caste feudals, and the cleansing with holy water when he enters their house? Why do we fail to see the dharma of Garnalu Saheb’s ultimate sacrifice by bursting a bomb to save his people??
Like any good movie, “Kantara” is uniting the people of the country surpassing the borders of caste, religion and language. Through entertainment, people are being made aware of many social issues. By using such a movie to incite superstition and bigotry and divide people, the greatest of successes can become greatest of failures for humanity.
Think for a moment before falling prey to the brokers of hatred, who have already hijacked the national anthem, flag, logo and poets, who have used and abused crores of freedom fighters including Patel Gandhi Bose Nehru, just for Vote. Think for a moment before they hijack our cinemas too.
Our movies are our pride. Do not let them become the pawns of bigoted politics.

– Kishore, Actor

Leave a Reply