ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮದೇನೂರು ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟ ಪ್ರರಕಣದ ಬಗ್ಗೆ ತನಿಖೆಗೆ ಆಗ್ರಹಿಸಿ ‘ನೈಜ ಹೋರಾಟಗಾರರ ವೇದಿಕೆ’ ಲೋಕಾಯುಕ್ತಕ್ಕೆ ದೂರು ನೀಡಿದೆ.
ಜಿಲ್ಲಾಧಿಕಾರಿಗಳು ತಮ್ಮ ಜವಾಬ್ದಾರಿ ಮರೆತು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಘಟನೆಯನ್ನು ತಡೆಯಲು ವಿಫಲಾಗಿದ್ದಾರೆ. ಆದ್ದರಿಂದ ಘಟನೆಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನೈಜ ಹೋರಾಟಗಾರರ ವೇದಿಕೆಯ ಮುಖಂಡ ಎಚ್.ಎಂ.ವೆಂಕಟೇಶ್ ಆಗ್ರಹಿಸಿದ್ದಾರೆ.
ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ. ಹಲವರು ಅಸ್ವಸ್ಥಗೊಂಡಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಮೃತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.




