ಕಾಂಗ್ರೆಸ್ ಬಡವರ, ದೀನದಲಿತರ ಪರ ಹೋರಾಡುವ ಪಕ್ಷ: ಬಿ.ಎಸ್.ಪುಟ್ಟರಾಜು

3 years ago

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನ ಸಂಪರ್ಕ ಕಛೇರಿ ಉದ್ಘಾಟನೆ

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನ ಸಂಪರ್ಕ ಕಛೇರಿಯನ್ನು ಬಸವೇಶ್ವರನಗರದಲ್ಲಿ ಉದ್ಘಾಟಿಸಲಾಯಿತು.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಶಾಸಕ ದಿನೇಶ್ ಗುಂಡೂರಾವ್, ಮಾಜಿ ಉಪಮೇಯರ್ ಬಿ.ಎಸ್.ಪುಟ್ಟರಾಜು ಉದ್ಘಾಟನೆ ಮಾಡಿದರು.

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಬಿ.ಎಸ್.ಪುಟ್ಟರಾಜು ಮಾತನಾಡಿ, ಎರಡು ಬಾರಿ ಮಹಾನಗರ ಪಾಲಿಕೆ ಸದಸ್ಯನಾಗಿ, ಉಪಮಹಾಪೌರನಾಗಿ ಬೆಂಗಳೂರು ನಗರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆ ಮತ್ತು ಕುಂದುಕೂರತೆ ಆಲಿಸಲು ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಜನಸಂಪರ್ಕ ಕಛೇರಿ ಆರಂಭಿಸಲಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ಬಡವರ, ದೀನದಲಿತರ ಪರ ಹೋರಾಟ ಮಾಡುವ ಪಕ್ಷ. ಕರ್ನಾಟಕದಲ್ಲಿ ಯುವ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆಯಿಂದ ಹೊಸ ಹುರಪು ಮೂಡಿದೆ. ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಹಾಗೂ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿರವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದ ಸಧೃಡವಾಗಿದೆ ಎಂದರು.

ಈ ಹಿಂದೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಜನತೆಗೆ ನೀಡಿದ 165 ಭರವಸೆಗಳನ್ನು ಈಡೇರಿಸಿದ ದೇಶದ ಮೊಟ್ಟ ಮೊದಲ ಸರ್ಕಾರ ಕಾಂಗ್ರೆಸ್ ಪಕ್ಷದ ಸರ್ಕಾರ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಕಾಯಕ ಸಿದ್ಧಾಂತವನ್ನು ಪರಿಪಾಲಿಸುವ ಕಾಂಗ್ರೆಸ್ ಪಕ್ಷ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಮನಸ್ವಿನಿ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ಬಡವರ ಪಾಲಿಗೆ ಆಶಾಕಿರಣವಾಯಿತು ಎಂದರು.

ಕಾಂಗ್ರೆಸ್ ಪಕ್ಷ ರಾಜಾಜಿನಗರ ಉತ್ತಮ ಸಂಘಟನೆಯಿಂದ ಕೂಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಕಾಂಗ್ರೆಸ್ ಪಕ್ಷ ಅಧಿಕಾರಿ ಬರಲಿದೆ ಎಂದು ಹೇಳಿದರು.

ಮಾಜಿ ಶಾಸಕ ಬಾಲಕೃಷ್ಣ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಜಿ.ಕೃಷ್ಣಮೂರ್ತಿ, ಮಂಜುಳ ವಿಜಯಕುಮಾರ್, ಮುರುಳಿ ಹಾಗೂ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರುಗಳು ಪಾಲ್ಗೊಂಡಿದ್ದರು.

Leave a Reply