ಕಾರಾಗೃಹ ಅಕ್ರಮ: ಸಿಬ್ಬಂದಿ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

3 years ago

ಬೆಂಗಳೂರು: ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತಿನ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಇತ್ತೀಚೆಗೆ ರಾಮನಗರ, ತುಮಕೂರು, ಕಲಬುರಗಿ ಹಾಗೂ ಬೆಳಗಾವಿ ಕಾರಾಗೃಹಗಳಲ್ಲಿ ಕೆಲವು ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಯಾಗಿದ್ದು ಇದರ ಬಗ್ಗೆ ವಿಸ್ತೃತ ತನಿಖೆಗೆ ಆದೇಶ ನೀಡಿದ್ದು ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್ ಪ್ರವೀಣ್ ಎಂಬುವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದರು.

ಹಾಸನ ಜಿಲ್ಲಾ ಕಾರಾಗೃಹದ ಮೇಲೆ ನಿನ್ನೆ, ಜಿಲ್ಲಾ ಪೊಲೀಸ್ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟುಕೊಳ್ಳಲಾಗಿದ್ದ ಮೊಬೈಲ್ ಸೆಟ್ ಗಳನ್ನು ಜಪ್ತಿ ಮಾಡಿದ್ದಾರೆ. ಮೊಬೈಲ್ ಗಳನ್ನು ಜೈಲಿನೊಳಗೆ ಸಾಗಿಸಲು ಸಹಕರಿಸಿದ ಸಿಬ್ಬಂದಿ ಹಾಗೂ ಅದನ್ನು ಜೈಲಿನೊಳಗೆ ಉಪಯೋಗಿಸಿದ ಜೈಲು ಬಂದಿ ಗಳ ವಿರುದ್ದ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.

ಬೆಳಗಾವಿ ಕೇಂದ್ರ ಕಾರಾಗೃಹದಿಂದ ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ, ಬೆದರಿಕೆ ಕರೆ ಮಾಡಿದ ಕೈದಿ ವಿರುದ್ಧವೂ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದದರು.

ರಾಜ್ಯದ ಕಾರಾಗೃಹಗಳಲ್ಲಿಅಕ್ರಮವಾಗಿ, ಮೊಬೈಲ್ ಉಪಯೋಗಿಸುವುದನ್ನು, ಪ್ರತಿಬಂಧಿಸಲು ಅತ್ಯಾಧುನಿಕ ಮೊಬೈಲ್ ಜಾಮರ್ ಗಳನ್ನು ಅಳವಡಿಸಲಾಗುತ್ತಿದೆ ಎಂದರು.

Leave a Reply