ಗ್ಲೋಬಲ್ ಹ್ಯೂಮನ್ ಪೀಸ್ ಯೂನಿರ್ವಸಿಟಿ ಉತ್ತಮ ಸಮಾಜ ಸೇವಕ ಪ್ರಶಸ್ತಿ

3 years ago

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕ, ಕಾಂಗ್ರೆಸ್ ಪಕ್ಷದ ನಾಯಕರಾದ ಸುದರ್ಶನ್ ಅವರ ಸಮಾಜ ಸೇವೆ ಗುರುತಿಸಿ ಗ್ಲೋಬಲ್ ಹ್ಯೂಮನ್ ಪೀಸ್  ಪ್ರಶಸ್ತಿ ಭಾಜನರಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಸುದರ್ಶನ್, ಕಳೆದ ಮೂವತ್ತು ವರ್ಷಗಳಿಂದ ಸಮಾಜ ಸೇವೆ ಮಾಡಿಕೊಂಡು ಬರುತ್ತಿದ್ದೇನೆ. ಮಹಿಳೆಯರು, ಮಕ್ಕಳು ಮತ್ತು ಹಿರಿಯರಿಗೆ ಉಚಿತವಾಗಿ ಇನ್ಯೂರೆನ್ಸ್ ಮಾಡಿಕೊಡಲಾಗಿದೆ ಎಂದರು.

ಪ್ರತಿವರ್ಷ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಮತ್ತು ಪರಿಸರ ಜಾಗೃತಿ ಅಭಿಯಾನ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಯಾಗಿದ್ದೇನೆ. ಯುವ ಕಾಂಗ್ರೆಸ್,ಕೆ.ಪಿ.ಸಿ.ಸಿ.ಮತ್ತು ಡಿ.ಸಿ.ಸಿ.ಕಾಂಗ್ರೆಸ್ ಪಕ್ಷದ ವಿವಿಧ ಸಮಿತಿಯಲ್ಲಿ ಸೇವೆ ಸಲ್ಲಿಸಿದ್ದೇನೆ. ಕೆ.ಪಿ.ಸಿ.ಸಿ.ಅದ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ರವರ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.

Leave a Reply