ಸ್ವಾಭಿಮಾನಿ ಪುಸ್ತಕ ಬಹುಮಾನ ಪುರಸ್ಕಾರಗಳ ಪ್ರಕಟಣೆ

5 years ago

ಬಹುಮಾನಿತ ಲೇಖಕರು ಮತ್ತು ಕೃತಿಗಳ ವಿವರ

ಡಾ. ಮಿರ್ಜಾ ಬಷೀರ್ ಅವರ ‘ಹಾರುವ ಹಕ್ಕಿ ಮತ್ತು ಇರುವೆ’ ಕಥಾಸಂಕಲನ

ಮಂಜುಳಾ ಹಿರೇಮಠ ಅವರ ‘ಗಾಯಗೊಂಡವರಿಗೆ’ ಕವನ ಸಂಕಲನ

ಸ್ಮಿತಾ ಅಮೃತರಾಜ್ ಅವರ ‘ಒಂದು ವಿಳಾಸದ ಹಿಂದೆ’ ಪ್ರಬಂಧ ಸಂಕಲನ

ಜಾಣಗೆರೆ ವೆಂಕಟರಾಮಯ್ಯ ಅವರ ‘ಜಲಯುದ್ಧ’ ಕಾದಂಬರಿ

ಸಂಕೀರ್ಣ ವಿಭಾಗದಲ್ಲಿ ಕಾ.ತ.ಚಿಕ್ಕಣ್ಣ ಅವರ ‘ಕಣ್ಣಂಚಿನ ನೆಳಲು’

ಬೆಂಗಳೂರು: ಕನ್ನಡ ಚಳವಳಿ ಮತ್ತು ಸಾಹಿತ್ಯಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ‘ಸ್ವಾಭಿಮಾನಿ ಕರ್ನಾಟಕ ವೇದಿಕೆ’ ಬೆಂಗಳೂರು, ತನ್ನ 20ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ‘ಸ್ವಾಭಿಮಾನಿ ಪುಸ್ತಕ ಬಹುಮಾನ’ ಪುರಸ್ಕಾರಕ್ಕೆ ಡಾ. ಮಿರ್ಜಾ ಬಷೀರ್ ಅವರ ‘ಹಾರುವ ಹಕ್ಕಿ ಮತ್ತು ಇರುವೆ’ ಕಥಾಸಂಕಲನ, ಮಂಜುಳಾ ಹಿರೇಮಠ ಅವರ ‘ಗಾಯಗೊಂಡವರಿಗೆ, ಕವನ ಸಂಕಲನ, ಸ್ಮಿತಾ ಅಮೃತರಾಜ್ ಅವರ ‘ಒಂದು ವಿಳಾಸದ ಹಿಂದೆ’ ಪ್ರಬಂಧ ಸಂಕಲನ, ಜಾಣಗೆರೆ ವೆಂಕಟರಾಮಯ್ಯ ಅವರ ‘ಜಲಯುದ್ಧ’ ಕಾದಂಬರಿ ಹಾಗೂ ಸಂಕೀರ್ಣ ವಿಭಾಗದಲ್ಲಿ ಕಾ.ತ.ಚಿಕ್ಕಣ್ಣ ಅವರ ‘ಕಣ್ಣಂಚಿನ ನೆಳಲು’ ಕೃತಿಗಳು ಆಯ್ಕೆಯಾಗಿವೆ.

ಸ್ಪರ್ಧೆಗೆ 2020ರಲ್ಲಿ ಪ್ರಕಟವಾದ 150ಕ್ಕೂ ಹೆಚ್ಚು ಕೃತಿಗಳು ಬಂದಿದ್ದು, ಅವುಗಳಲ್ಲಿ ಅತ್ಯುತ್ತಮವಾದ ಐದು ಕನ್ನಡ ಕೃತಿಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ 5000 ರೂಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸ್ವಾಭಿಮಾನಿ ಕರ್ನಾಟಕ ವೇದಿಕೆ ಹೇಳಿದೆ.

ಹಿರಿಯ ವಿಮರ್ಶಕ ಎಸ್.ಆರ್. ವಿಜಯಶಂಕರ, ಹಿರಿಯ ಲೇಖಕ ದ್ವಾರನಕುಂಟೆ ಪಾತಣ್ಣ ಹಾಗೂ ಪತ್ರಕರ್ತ ರಘುನಾಥ ಚ.ಹ. ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕೊರೊನಾ ಬಿಕ್ಕಟ್ಟು ತಿಳಿಯಾದ ನಂತರ ಪ್ರಶಸ್ತಿ ಪ್ರದಾನ ಸಮಾರಂಭವನ್ಉ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.

Leave a Reply