ಬೆಂಗಳೂರು: ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನದಲ್ಲಿ ಹಕ್ಕು ಚಲಾಯಿಸಲು ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆಯ ಮತಗಟ್ಟೆಗೆ ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನವಾಗಿದ್ದು, ಅಲ್ಲಿಯೇ ಮತ ಚಲಾವಣೆಗೆ ವೈದ್ಯರೊಬ್ಬರು ಬಂದಿದ್ದರಿಂದ ಅವರ ಜೀವ ಉಳಿದಿದೆ.
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
ಜೆ.ಪಿ.ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ.
ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ಧಾವಿಸಿದ್ದಾರೆ.

ನಾಡಿಮಿಡಿತ ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್ ರೇಟ್ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡ ಡಾ. ಗಣೇಶ್ ಶ್ರೀನಿವಾಸ್, ಕುಸಿದು ಬೀಳುತ್ತಿದ್ದ ಮಹಿಳೆಯನ್ನು ಕಂಡು ನೆರವಿಗೆ ಧಾವಿಸಿದೆ. ನಾನು ಅವಳ ನಾಡಿಮಿಡಿತವನ್ನು ಪರಿಶೀಲಿಸಿದೆ. ಅದು ತುಂಬಾ ಕಡಿಮೆಯಾಗಿದೆ ಅನ್ನೋದು ಕಂಡುಬಂದಿತು. ಕಣ್ಣುಗಳನ್ನು ಮೇಲಕ್ಕೆತ್ತಿದ್ದರು. ಅವರ ದೇಹವು ಯಾವುದೇ ಪ್ರತಿಕ್ರಿಯೆಯನ್ನು ತೋರಿಸಲಿಲ್ಲ ಮತ್ತು ಉಸಿರುಗಟ್ಟುತ್ತಿದ್ದರು. ನಾನು ತಕ್ಷಣ ಸಿಪಿಆರ್ (ಹೃದಯ ಶ್ವಾಸಕೋಶದ ಪುನರುಜ್ಜೀವನ) ಮಾಡಿದ್ದೇನೆ ಮತ್ತು ಅವರ ಸ್ಥಿತಿ ಸುಧಾರಿಸಿದೆ. ಆಗ ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದರು. ಆಂಬ್ಯುಲೆನ್ಸ್ ಅನ್ನು ಕರೆಸಿ ಆಸ್ಪತ್ರೆಗೆ ಸಾಗಿಸಲಾಯಿತು. ವಿಳಂಬವಾಗಿದ್ದರೆ ನಾವು ಅವಳನ್ನು ಕಳೆದುಕೊಳ್ಳುವ ಸಾಧ್ಯತೆ ಇತ್ತು ಎಂದರು.




